ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

27

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದರು.
ಚಿಕ್ಕಬಾಣವಾರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ, ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ನಿರ್ಮಾಣ, ಆವತಿಯಲ್ಲಿ ಭಾರತೀಯ ಮೀಸಲು ಪಡೆಯ ಶಂಕುಸ್ಥಾಪನೆ ಹಾಗೂ ವಾಯವ್ಯ ವಿಭಾಗ ಉಪ ಪೊಲೀಸ್ ಆಯುಕ್ತರ ಕಚೇರಿ, ಚಿಕ್ಕ ಬಾಣಾವರ ಪೊಲೀಸ್ ಠಾಣೆಯ ನೂತನ ಕಚೇರಿ, ಈಶಾನ್ಯ ವಿಭಾಗ ಉಪ ಪೊಲೀಸ್ ಆಯುಕ್ತರ ಕಚೇರಿ, ದೇವನಹಳ್ಳಿ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ ಮತ್ತು ದೇವನಹಳ್ಳಿ ಪೊಲೀಸ್ ಠಾಣೆಯ ನೂತನವಾಗಿ ನಿರ್ಮಿಸಲಾದ ಕಚೇರಿ ಕಟ್ಟಡಗಳ ಉದ್ಘಾಟನೆಯನ್ನು ನೆರವೇರಿಸಿದ ಬಳಿಕ ಸಚಿವರು ಮಾತನಾಡಿದರು.
ನೊಂದವರು, ಶೋಷಿತರಿಗೆ ನ್ಯಾಯ ಕೊಡಿಸಲು ಪೊಲೀಸ್ ಇಲಾಖೆ ಇದೆ. ಈ ನಿಟ್ಟಿನಲ್ಲಿ ಪೊಲೀಸರು ಕೆಲಸ ಮಾಡಬೇಕು. ಯಾವ ಅಧಿಕಾರಿಯೂ ಕೂಡ ರಿಯಲ್ ಎಸ್ಟೇಟ್ ವ್ಯವಹಾರ ಮಾಡಬಾರದು. ಪೊಲೀಸ್ ಠಾಣೆಯಲ್ಲಿ ರಾಜಿ ಪಂಚಾಯಿತಿ ನಡೆಯಬಾರದು. ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಪೊಲೀಸ್ ಠಾಣೆಗೆ ಬಂದವರನ್ನು ಸರಿಯಾದ ರೀತಿಯಲ್ಲಿ ಗೌರವದಿಂದ ವರ್ತಿಸಬೇಕು ಎಂದು ಸೂಚನೆ ನೀಡಿದರು.
ಪೊಲೀಸ್ ಇಲಾಖೆ ಶಿಸ್ತುಬದ್ಧಿನ ಇಲಾಖೆ. ಇಡೀ ದೇಶದಲ್ಲಿ ಶಿಸ್ತು, ಸಂಯಮದಿಂದ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸರಕಾರವು ಪೊಲೀಸ್ ಇಲಾಖೆಯಲ್ಲಿ ಅನೇಕ ಹೊಸ ಬದಲಾವಣೆಗಳನ್ನು ತಂದಿದೆ. ಕರ್ನಾಟಕ ಪೊಲೀಸ್ ನ್ಯಾಯ ಒದಗಿಸುವುದರಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಇದೇ ವೇಳೆ ಪೊಲೀಸ್ ಇಲಾಖೆಯಲ್ಲಿ ಒಟ್ಟು ರೂ.594 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ ಅವರು, ಅವತಿ ಪ್ರದೇಶದಲ್ಲಿ ರೂ.568 ಕೋಟಿ ವೆಚ್ಚದಲ್ಲಿ ಇಂಡಿಯಾ ರಿಸರ್ವ್ ಬ್ಯಾಟಾಲಿಯನ್ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.
ಸರ್ಕಾರದ ಬಳಿ ಹಣವಿಲ್ಲ ಎಂಬ ಆರೋಪಗಳು ರಾಜಕೀಯ ಉದ್ದೇಶಿತವೆಂದು ಅವರು ಸ್ಪಷ್ಟಪಡಿಸಿದರು. ಪೊಲೀಸ್ ನೇಮಕಾತಿ ಕುರಿತು ಮಾತನಾಡಿ, ಪಿಎಸ್‌ಐ ಹುದ್ದೆಗಳ ನೇಮಕಾತಿಯನ್ನು ನಾವು ಪೂರ್ಣಗೊಳಿಸಿದ್ದೇವೆ ಮುಂದಿನ ದಿನಗಳಲ್ಲಿ ಇನ್ನಷ್ಟು ನೇಮಕಾತಿ ನಡೆಯಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್ ಮುನಿಯಪ್ಪ, ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್, ಡಿಜಿ ಮತ್ತು ಐಜಿಪಿ ಎಂಎ ಸಲೀಂ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಅಂಗಡಿ, ಮನೆ ಖಾಲಿ ಮಾಡಲು ಸೂಚನೆ ಬೃಹತ್ ತಡೆಗೋಡೆಯಲ್ಲಿನ ಬಿರುಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು,...

ಬಿಜೆಪಿಯ ಪ್ರಮುಖ ಮೂವರು ನಾಯಕರಿಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ ಕೋರ್ ಕಮಿಟಿ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ಸುಮಾರು ಎರಡೂವರೆ ಗಂಟೆ ಕಾಲ ನಡೆಯಿತು. ಕಾಂಗ್ರೆಸ್...

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026ಚಾಲನೆ ಪ್ರವಾಸೋದ್ಯಮ ಸಚಿವ ಕೆಜೆ ಜಾರ್ಜ್

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ...

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಕಸರತ್ತು ಕೇಂದ್ರ ಸಚಿವ ವಿ ಸೋಮಣ್ಣಗೆ ಒಲಿಯಲಿದೆಯೇ ರಾಜ್ಯಾಧ್ಯಕ್ಷ ಸ್ಥಾನ

ಬೆಂಗಳೂರು: ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗು ಬಹಳ ಹಿಂದಿನಿಂದಲೂ ಕೇಳಿ...