ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

32

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ. ಬದಲಿಗೆ ಡಿಜಿಟಲ್‌ ಅಂಕಪಟ್ಟಿ ಮಾತ್ರವೇ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಿನ್ನೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಬಾರಿಗೆ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿಲಾಕರ್‌ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಅದರ ಜೊತೆಗೆ ಈ ವರ್ಷದ ಮಟ್ಟಿಗೆ ಮುದ್ರಿತ ಅಂಕಪಟ್ಟಿಯನ್ನು ನೀಡಲಾಗುವುದು. ಆದರೆ, ಮುಂದಿನ ಸಾಲಿನಿಂದ ಸಂಪೂರ್ಣ ಡಿಜಿಟಲ್‌ ಅಂಕಪಟ್ಟಿಯನ್ನು ಮಾತ್ರ ನೀಡಲಾಗುವುದು. ಇದರಿಂದ ಸರ್ಕಾರಕ್ಕೆ ಒಂದಷ್ಟು ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದರು.
ಐತಿಹಾಸಿಕ ಫಲಿತಾಂಶ ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಐತಿಹಾಸಿಕ ಫಲಿತಾಂಶ ಬರಲು ಕಷ್ಟಪಟ್ಟು ವ್ಯಾಸಂಗ ಮಾಡಿದ ಎಲ್ಲಾ ವಿದ್ಯಾರ್ಥಿಗಳು, ಅವರಿಗೆ ಸಹಕಾರ ನೀಡಿದ ಶಿಕ್ಷಕರು, ಪೊಷಕರು ಹಾಗೂ ನಮ್ಮ ಮಂಡಳಿ ಅಧಿಕಾರಿಗಳು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ.ಮುಂದಿನ ದಿನಗಳಲ್ಲೂ ಇದೇ ರೀತಿಯ ಫಲಿತಾಂಶ ಇನ್ನಷ್ಟು ಉತ್ತಮಗೊಳ್ಳುವ ವಿಶ್ವಾಸವಿದೆ. ಅದಕ್ಕಾಗಿ ನಮ್ಮ ಸರ್ಕಾರ ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....