ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

40

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಆದರೆ ಪಕ್ಷದಲ್ಲಿ ಈಗ ಮುಸ್ಲಿಂ ನಾಯಕರ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ
. ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತೊಂದು ಮುಸ್ಲಿಂ ಬಣ ತಿರುಗಿ ಬಿದ್ದಿತ್ತು. ದಾವಣಗೆರೆ ಚುನಾವಣೆ ಪ್ರಚಾರದ ವೇಳೆ ನಡೆದ ಹಗ್ಗಜಗ್ಗಾಟ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯಲ್ಲಿ ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದೆ.
ಜಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ದರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಜಮೀರ್ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮದ ತೂಗುಕತ್ತಿ ನೇತಾಡುತ್ತಿದೆ.
ಅಲ್ಪಸಂಖ್ಯಾತ ಸಮುದಾಯದ ಕೆಲವು ಶಾಸಕರೇ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಜಮೀರ್ ‘ತಲೆದಂಡ’ವಾಗುವುದು ಬಹುತೇಕ ನಿಶ್ಚಿತ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿಬರುತ್ತಿವೆ. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಸೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...

ಮಾಜಿ ಸಚಿವ ನಾಗೇಂದ್ರ ಗೆ ಮತ್ತೆ ಸಂಕಷ್ಟ ಮರು ತೀವ್ರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾರಿ...

ಸಾಲ ಮರುಪಾವತಿಸಿಲ್ಲ  ಕಾರಣಕ್ಕೆ  ಮಹಿಳೆ ಅಪಹರಿಸಿ ಅರೆ ಬೆತ್ತಲೆಗೊಳಿಸಿ  ಹಲ್ಲೆ ನಜತ್ ಬೇಗಂ ಸೇರಿದಂತೆನಾಲ್ವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಸಾಲ ಮರುಪಾವತಿಸಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯೊಬ್ಬರನ್ನು ಕಿಡ್ನಾಪ್ ಮಾಡಿ, ನಾಲ್ಕು ದಿನಗಳ...