ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

30

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸ್ಕೆಚ್ ಹಾಕಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧನ (IED) ಮೊಬೈಲ್, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಿ ಐಇಡಿ ಅಳವಡಿಸಲಾದ ರಿಮೋಟ್-ನಿಯಂತ್ರಿತ ಟಾಯ್ ಕಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ಇಬ್ಬರು ಆರೋಪಿಗಳು ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿಶೇಷ ದಳವು ಗುಪ್ತಚರ ನೇತೃತ್ವದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಇಬ್ಬರು ಮತ್ತು ಒಡಿಶಾ ಮತ್ತು ಬಿಹಾರದಿಂದ ತಲಾ ಒಬ್ಬ ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಾಲ್ವರು ಖಲೀಫತ್ ಸ್ಥಾಪನೆಯ ಆಲೋಚನೆಯೊಂದಿಗೆ ಉಗ್ರಗಾಮಿ ಸಿದ್ಧಾಂತದಿಂದ ಪ್ರಭಾವಿತರಾಗಿದ್ದರು ಮತ್ತು “ಘಜ್ವಾ-ಎ-ಹಿಂದ್” ನಂತಹ ನಂಬಿಕೆ ಪ್ರಚಾರ ಮಾಡುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಖುರಾಸಾನ್‌ನ ಲಷ್ಕರ್’ ಪರಿಕಲ್ಪನೆಯಿಂದ ಪ್ರೇರಿತರಾಗಿದ್ದ ಆರೋಪಿಗಳು ಇತರರನ್ನು ಮತಾಂಧರನ್ನಾಗಿ ಮಾಡಲು ಕಪ್ಪು ಧ್ವಜ ಹಿಡಿದು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳು ಮುಚ್ಚಿದ ಮತ್ತು ಎನ್‌ಕ್ರಿಪ್ಟ್ ಮಾಡಿದ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲಿ ಜಿಹಾದ್, ಉಗ್ರಗಾಮಿ ಸಿದ್ಧಾಂತ ಮತ್ತು ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಳ್ಳಲಾಗುತ್ತಿತ್ತು. ಹೊಸ ಸದಸ್ಯರನ್ನು ಗುರುತಿಸಲು, ಬೋಧನೆ ಮಾಡಲು ಮತ್ತು ನೇಮಕ ಮಾಡಲು ಈ ವೇದಿಕೆಗಳನ್ನು ಬಳಸಲಾಗುತ್ತಿತ್ತು. ಆರೋಪಿಗಳಲ್ಲಿ ಒಬ್ಬ ತನ್ನ ಅನುಯಾಯಿಗಳನ್ನುಮತಾಂಧರನ್ನಾಗಿ ಮಾಡಲು ಮತ್ತು ಗುರಿಯ ಸಂಕೇತವಾಗಿ ಕಪ್ಪು ಧ್ವಜದೊಂದಿಗೆ ಕೆಂಪು ಕೋಟೆಯ ಚಿತ್ರವನ್ನು ಹಂಚಿಕೊಂಡಿದ್ದಾನೆ ಆರೋಪಿಸಲಾಗಿದೆ.
ಮತ್ತೊಬ್ಬ ಆರೋಪಿ ಡಿಸೆಂಬರ್ 2025 ರಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳನ್ನು ಪರಿಶೀಲಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.ಅಯೋಧ್ಯೆಯ ರಾಮ ಮಂದಿರ, ಸಂಸತ್ತು ಮತ್ತು ಕೆಲವು ಮಿಲಿಟರಿ ನೆಲೆಗಳ ಮೇಲೆ ಸಂಭಾವ್ಯ ದಾಳಿಗಳ ಬಗ್ಗೆ ಮಾಡ್ಯೂಲ್ ಚರ್ಚಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಭೀತಿ ಮತ್ತು ಮಾನಸಿಕ ಪರಿಣಾಮವನ್ನು ಹೆಚ್ಚಿಸಲು ಜನದಟ್ಟಣೆಯ ಸಾರ್ವಜನಿಕ ಸ್ಥಳಗಳು ಮತ್ತು ಪಾರಂಪರಿಕ ಕಟ್ಟಡಗಳ ಮೇಲೆ ದಾಳಿ ನಡೆಸಲು ಈ ಗುಂಪು ಸಂಚು ರೂಪಿಸಿತು ಎಂದು ಭದ್ರತಾ ಪಡೆಗಳು ಹೇಳಿವೆ. ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರ ಸಹಚರರು, ನಿರ್ವಾಹಕರು ಮತ್ತು ಜಾಲದ ಬಗ್ಗೆ ಮಾಹಿತಿ ತಿಳಿಯಲು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ...

ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡನೆ

ನವದೆಹಲಿ: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು,...

ಕುಂಭಮೇಳ ವೈರಲ್ ಯುವತಿ ಮೊನಾಲಿಸಾ ದಂಪತಿಗಳಿಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಹಿಂಪಡೆದುಕೊಂಡ ಕೇರಳ ಹೈ ಕೋರ್ಟ್

“ಕೊಚ್ಚಿ: ಕುಂಭಮೇಳ 2025 ರಲ್ಲಿ ಸಾಕಷ್ಟು ವೈರಲ್‌ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ...