ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

29

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದು, 1.70 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪಿಎಸ್ಐ ಮತ್ತು ಕಾನ್ಸ್‌ಟೇಬಲ್ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.
ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಅವರನ್ನು ಬಂಧಿಸಲಾಗಿದೆ.


ಆರೋಪಿಗಳು, ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್‌ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲಂಚದ ಬೇಡಿಕೆ ಬಗ್ಗೆ ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಫೋನ್‌ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ದಾಳಿ ಮಾಡಿ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್.ಪಿ ಮಹಾಲಿಂಗ್ ನಂದಗಾಂವಿ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಡಿವೈಎಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Leave a comment

Leave a Reply

Your email address will not be published. Required fields are marked *

Related Articles

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...

ಆಂಜನೇಯ ದೇವಸ್ಥಾನ ಅಕ್ರಮ ಪ್ರವೇಶ ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಬಂಧನ

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ...