ಮಂಗಳೂರು ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್ ಐ ಎ ಕೋರ್ಟ್

29

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು.
ಸ್ಫೋಟದಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಶಾರಿಕ್ ತನ್ನ ಮೇಲಿರುವ ಎಲ್ಲಾ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...