ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

60

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ಸೋಲು ಕಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಜನಾದೇಶವನ್ನು ತಳ್ಳಿಹಾಕಿದಂತೆ ಮಮತಾ ಬ್ಯಾರ್ಜಿಯವರು ಹೇಳಿಕೆ ನೀಡುತ್ತಿದ್ದು, ರಾಜಕೀಯ ಪಕ್ಷಗಳ ಆಕ್ರೋಶ ಕಾರಣವಾಗಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ. ಈ ವಿಚಾರದಲ್ಲಿ ಗವರ್ನರ್ ಹಸ್ತಕ್ಷೇಪ ಅಗತ್ಯವಿದೆ. ಜನರು ನೀಡಿದ ತೀರ್ಪನ್ನು ಒಪ್ಪಿಕೊಳ್ಳದೇ ಅಧಿಕಾರದಲ್ಲೇ ಮುಂದುವರಿಯಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷವು ಈ ಬಾರಿ ನಿರೀಕ್ಷಿತ ಫಲಿತಾಂಶವನ್ನು ಪಡೆಯಲು ವಿಫಲವಾಗಿದ್ದು, ಭಾರತೀಯ ಜನತಾ ಪಕ್ಷದ ಭಾರೀ ಮುನ್ನಡೆ ಸಾಧಿಸಿ ಸರ್ಕಾರ ರಚನೆಗೆ ಸಜ್ಜಾಗಿದೆ. ಆದರೆ, ಮಮತಾ ಬ್ಯಾನರ್ಜಿ ಅವರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ “ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ನಿಲುವನ್ನು “ನೈತಿಕ ಜಯ” ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ, ವಿರೋಧ ಪಕ್ಷಗಳು ಇದನ್ನು ಜನರ ತೀರ್ಪಿಗೆ ಮಾಡಿರುವ ಅವಮಾನ ಎಂದು ಹೇಳುತ್ತಿವೆ. ಭಾರತದ ಸಂವಿಧಾನ ಪ್ರಕಾರ, ಮುಖ್ಯಮಂತ್ರಿಗೆ ಸ್ಪಷ್ಟ ಬಹುಮತ ಇಲ್ಲದಿದ್ದರೆ ಅವರು ಪದವಿಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ.
ಈ ಸಂದರ್ಭದಲ್ಲಿಯೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಬಹುಮತ ಸಾಬೀತುಪಡಿಸಲು ಸೂಚಿಸಬಹುದು ಅಥವಾ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬಹುದು. ಈಗ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮುಂದಿನ ಹಂತ ಏನು ಎನ್ನುವುದು ರಾಜ್ಯಪಾಲರ ನಿರ್ಧಾರ ಮತ್ತು ಸಂವಿಧಾನಾತ್ಮಕ ಪ್ರಕ್ರಿಯೆಗಳ ಮೇಲೆ ಅವಲಂಬಿತವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...