ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

22

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಅಪರಾಹ್ನ 3.30ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಭಾಧ್ಯಕ್ಷ ಯುಟಿ ಖಾದರ್ ಸಮಯ ನಿಗದಿಪಡಿಸಿದ್ದಾರೆ.

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಬಿಜೆಪಿ ವಿಳಂಬ ಆರೋಪ ಮಾಡಿತ್ತು.
ಬಿಜೆಪಿ ಪ್ರತಿನಿಧಿ ಮಂಡಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಸ್ಪೀಕರ್ ಲಭ್ಯವಿಲ್ಲದಿದ್ದರೆ ತಾವೇ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಮನವಿ ಮಾಡಿದ್ದರು

ಕೊನೆಗೂ ಸಭಾಧ್ಯಕ್ಷರು ಸಮಯ ನಿಗದಿಪಡಿಸಿದ್ದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಜೀವರಾಜ್ ಖುಷಿ ಹಂಚಿಕೊಂಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಜೀವರಾಜ್ ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಕೋರ್ಟ್ ಮೊರೆಹೋಗಿದ್ದರು. ಕಳೆದ ವಾರಾಂತ್ಯ ಹೈಕೋರ್ಟ್ ಆದೇಶದಂತೆ ನಡೆದ ಮರುಎಣಿಕೆಯಲ್ಲಿ 52 ಮತಗಳ ಅಂತರದಿಂದ ಗೆದ್ದು ಶಾಸಕರಾಗಿ ಘೋಷಿಸಲ್ಪಟ್ಟಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...