ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

27

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಲು ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು. ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಸುವೇಂದು ಅಧಿಕಾರಿ ಅವರ ಹೆಸರನ್ನು ಘೋಷಿಸಿದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
“ಪಶ್ಚಿಮ ಬಂಗಾಳ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಅವರು ಆಯ್ಕೆಯಾಗಿದ್ದಾರೆ” ಎಂದು ಪಶ್ಚಿಮ ಬಂಗಾಳದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ವೀಕ್ಷಕರಾಗಿ ನೇಮಕಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ
. ಸಂಜೆ 6:30ಕ್ಕೆ ರಾಜ್ಯಪಾಲರ ಭೇಟಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಅವರು ಇಂದು ಸಂಜೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಎನ್ ರವಿ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...