ನಟ ದರ್ಶನ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ ವದಂತಿ  ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

26

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆದಾಗ್ಯೂ, ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು ಮತ್ತು ವರದಿಗಳು ಕೇವಲ ವದಂತಿ ಎಂದು ದೃಢಪಡಿಸಿದರು. ಭಾನುವಾರ ರಾತ್ರಿಯಿಂದಲೇ ಈ ರೀತಿ ವದಂತಿಗಳು ಹರಡುತ್ತಿವೆ.
ಇದರಿಂದಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಿರ ದೂರವಾಣಿ ಮೂಲಕ ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕೇಳುತ್ತಿದ್ದಾರೆ ಎಂದು ಹಿರಿಯ ಜೈಲು ಸಿಬ್ಬಂದಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ
ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿವೆ. ಅಂತಹ ವದಂತಿಗಳನ್ನು ನಂಬಿ ಯಾರೂ ಪರಪ್ಪನ ಅಗ್ರಹಾರ ಕೇಂದ್ರ ಜೈಲಿನ ಬಳಿ ಬರಬಾರದು ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು. ಇದೀಗ ಆಘಾತಕಾರಿ ವದಂತಿ ಹರಡಿದ್ದು, ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...