ವಿಧಿವಿಜ್ಞಾನ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಎಸ್ಐಟಿ ತಂಡದಿಂದ ಪರಿಶೀಲನೆ

27

“ಮಂಗಳೂರು: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಿಧಿ ವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡಿ ಕಾಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಮೂವರು ಸದಸ್ಯರ ತಂಡವು ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ. ಈ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಒಪ್ಪಿಸಿದ್ದ ತಲೆ ಬುರುಡೆಯನ್ನು ಕಾಡಿನಿಂದ ಹೊರತೆಗೆದಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಬಳಿಕ ಆ ತಲೆ ಬುರುಡೆಯನ್ನು ನಾನು ನೆಲದಿಂದ ಹೊರತೆಗೆದಿಲ್ಲ ಎಂದು ಚಿನ್ನಯ್ಯ ಪೊಲೀಸರ ಮುಂದೆ ಒಪ್ಪಿಕೊಂಡಿದ್ದ ತಲೆಬುರುಡೆ ತೆಗೆಯುವ ದೃಶ್ಯವನ್ನು ಚಿತ್ರೀಕರಿಸಿದ್ದ ಪ್ರದೀಪ್ ಕುಲಾಲ್ ಎಂಬಾತ ಈ ಬಗ್ಗೆಎಸ್ ಐಟಿ ಮುಂದೆ ಹೇಳಿಕೆ ನೀಡಿದ್ದ. ಆತನನ್ನು ಎಸ್ ಐಟಿ ಹಾಗೂ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಜೊತೆಯಲ್ಲಿ ಕಾಡಿನಲ್ಲಿ ಕರೆದೊಯ್ದು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ತಲೆಬುರುಡೆ ಪತ್ತೆಯಾದ ಸ್ಥಳಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳ ಅಗತ್ಯ ಇರುತ್ತದೆ. ಅದಕ್ಕಾಗಿ ವಿಧಿ ವಿಜ್ಞಾನ ತಂಡ ಹಾಗೂ ಎಸ್ ಐಟಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.”

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...