ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿಕೆ

21

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ. ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಪ್ರತ್ಯೇಕ ಸಭೆ ನಡೆದಿದೆ. ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರ ಸಭೆ ನಡೆದಿದ್ದು, ಈ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಗಂಭೀರ ಚರ್ಚೆಯಾಗಿದೆ. ಇನ್ನು ಸಾಧಕ-ಬಾಧಕಗಳ ಬಗ್ಗೆಯೂ ಸಹ ಸಿದ್ದರಾಮಯ್ಯನವರು, ರಾಹುಲ್ ಗಾಂಧಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
6 ಗಂಟೆಗಳ ಮ್ಯಾರಥಾನ್‌ ಸಭೆಯ ಬಳಿಕ ಸಂಜೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ನಾವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವಿವರವಾದ ಸಭೆ ನಡೆಸಿದ್ದೇವೆ.
ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಮತ್ತು ನಾನು ಭಾಗವಹಿಸಿದ್ದೇವು.
ಇಂದು ಇಡೀ ಚರ್ಚೆಯು ಮುಂಬರುವ ರಾಜ್ಯಸಭಾ ಚುನಾವಣೆ ಮತ್ತು ಕರ್ನಾಟಕದ ವಿಧಾನ ಪರಿಷತ್ ಚುನಾವಣೆಗಳ ಮೇಲೆ ಮಾತ್ರ ಕೇಂದ್ರೀಕೃತವಾಗಿತ್ತು. ನೀವು ಏನೇ ಊಹಾಪೋಹ ಮಾಡುತ್ತಿದ್ದರೂ ಅದು ಕೇವಲ ಊಹಾಪೋಹ. ವಾಸ್ತವವೇ ಬೇರೆ. ಇಂದು ನಾವು ಕರ್ನಾಟಕದ ರಾಜ್ಯಸಭಾ ಸ್ಥಾನಗಳು ಮತ್ತು ಪರಿಷತ್ ಸ್ಥಾನಗಳ ಬಗ್ಗೆ ಚರ್ಚಿಸಿದ್ದೇವೆ.
ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನಂತಹ ಇತರ ಸ್ಥಾನಗಳ ಜೊತೆಗೆ ಕರ್ನಾಟಕದ ರಾಜ್ಯಸಭಾ ಮತ್ತು ಪರಿಷತ್ ಸ್ಥಾನಗಳ ಅಭ್ಯರ್ಥಿಗಳನ್ನು ಶೀಘ್ರ ಘೋಷಿಸಲಾಗುವುದು. ಇಂದು ನಾವು ನಿರ್ಧರಿಸಿದ್ದು ಇದನ್ನೇ, ಬೇರೆ ಯಾವುದೇ ವಿಚಾರ ಚರ್ಚೆ ಬಂದಿಲ್ಲ ಎಂದು ವೇಣುಗೋಪಾಲ್ ಸ್ಪಷ್ಟಪಡಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...