ಸಂಪುಟ ರಚನೆಯ ಕಸರತ್ತು ದೆಹಲಿಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್

17

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಿ, ತಮ್ಮ ಸಂಪುಟ ಸೇರುವ ಶಾಸಕರ ಬಗ್ಗೆ ಮತ್ತು ರಾಜ್ಯದ ಇತರ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಜೂನ್ 3 ರಂದು ತಮ್ಮೊಂದಿಗೆ ಎಷ್ಟು ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಿದ್ದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಿಎಲ್‌ಪಿ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಸಾಲು ಸಾಲು ನಾಯಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹಾಕುತ್ತಿದ್ದು, ಡಿಕೆ ಶಿವಕುಮಾರ್ ಅವರು ನಾಳೆಯೇ ದೆಹಲಿಗೆ ಹಾರಲಿದ್ದಾರೆ.

“ಪ್ರಮಾಣ ವಚನ ಕಾರ್ಯಕ್ರಮ ಹಾಗೂ ಸಚಿವರ ಹೆಸರು ಫೈನಲ್ ಮಾಡಲು ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಸಚಿವ ಸಂಪುಟ ಕುರಿತು ಚರ್ಚಿಸಲಿರುವ ಡಿಕೆ ಶಿವಕುಮಾರ್ ತಮ್ಮ ಜೊತೆ ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸಬೇಕು. ಮುಂದಿನ ಪ್ರಕ್ರಿಯೆ ಸೇರಿ ಹಲವು ವಿಚಾರದ ಬಗ್ಗೆ ಚರ್ಚಿಸಲಿದ್ದಾರೆ.

ಇನ್ನು ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಸಹ ನಾಳೆ ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ತಮ್ಮ ಆಪ್ತರಿಗೆ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಅವರು, ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...