ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

22

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ
. ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು. ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದರು.
ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವಕ ಸಂಘ’ ರಚನೆ ಮಾಡುವ ಚಿಂತನೆ ಇದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯಾದ್ಯಂತ ಒಟ್ಟು 10 ಸಾವಿರ ಯುವಕರ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದರು. ಮೊದಲ ಸಚಿವ ಸಂಪುಟದ ಘೋಷಣೆಗಳು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ 2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್
ಪ್ರತಿ‌ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ. ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಪ್ರೈವೇಟ್ ಎಂಪ್ಲೋಯಮೆಂಟ್ ಎಕ್ಸ್ ಚೇಂಜ್ ಸೆಂಟರ್ ಸ್ಥಾಪನೆ.

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...