ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

2

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ
. ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು. ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದರು.
ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವಕ ಸಂಘ’ ರಚನೆ ಮಾಡುವ ಚಿಂತನೆ ಇದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯಾದ್ಯಂತ ಒಟ್ಟು 10 ಸಾವಿರ ಯುವಕರ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದರು. ಮೊದಲ ಸಚಿವ ಸಂಪುಟದ ಘೋಷಣೆಗಳು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಘೋಷಣೆ 2,500 ಚದರ ಅಡಿವರೆಗೂ ಒಸಿ ವಿನಾಯಿತಿ. ಇದರೊಂದಿಗೆ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್
ಪ್ರತಿ‌ ಪಂಚಾಯತ್ ಗೂ ಭಾರತ್ ಜೋಡೋ ಯುವಕ ಸಂಘ ಸ್ಥಾಪನೆಗೆ 10 ಸಾವಿರ ರೂಪಾಯಿ ಘೋಷಣೆ. ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಪ್ರೈವೇಟ್ ಎಂಪ್ಲೋಯಮೆಂಟ್ ಎಕ್ಸ್ ಚೇಂಜ್ ಸೆಂಟರ್ ಸ್ಥಾಪನೆ.

Leave a comment

Leave a Reply

Your email address will not be published. Required fields are marked *

Related Articles

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ.

ಉಡುಪಿ: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ ಆಯ್ಕೆಯಾದ ಶ್ರೀ ಸುಕೇಂದ್ರ ಇವರಿಗೆ ಉಡುಪಿ...

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆಮುಖ್ಯಮಂತ್ರಿ ಯಾಗಿ ಡಿಕೆಶಿವಕುಮಾರ್ ಪದಗ್ರಹಣಕ್ಕೆ ಸಿದ್ಧತೆ; ಸೋಮವಾರ 8 ಸಚಿವರ ಜೊತೆ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು...

ಹೈಕಮಾಂಡ್ ಆದೇಶದ ಮೇಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ...