ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

20

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಆದೇಶ ಆದೇಶದಲ್ಲಿ ಏನಿದೆ? ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ `ಕರ್ತವ್ಯ ಆಪ್ ’ ನಲ್ಲಿ ಈಗಾಗಲೇ ಎಚ್ ಆರ್ ಎಮ್ ಎಸ್ ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನ ನೋಂದಾಯಿಸಲಾಗಿದೆ. ಆದ್ರೆ ಬಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶವನ್ನ (ಆಪ್ ) ನಿರಂತರವಾಗಿ ಬಳಸುತ್ತಿಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...