ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

23

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿಕ್ರಿಯಾಶೀಲ ವ್ಯಕ್ತಿ ಸಂಘಟನಾ ಚತುರ  ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ, ಕೋಶಾಧಿಕಾರಿಯಾಗಿ ಉಪನ್ಯಾಸಕರಾದ ರಾಮದಾಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಮತಿ ಪೂರ್ಣಿಮಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ಶಾಲಾ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಶಾಲಾ ಹಳೆ ವಿದ್ಯಾರ್ಥಿಗಳ ಸಭೆಯನ್ನು ಜೂ. 7ರಂದು ಶಾಲೆಯಲ್ಲಿ ಕರೆಯಲಾಗಿದ್ದು ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೈಲೂರು ಶಾಲಾ ಆವರಣದಲ್ಲಿ ನಡೆದ ಈ ಪುನರ್ ರಚನಾ ಸಭೆಯಲ್ಲಿ ಸಂಸ್ಥೆಯ ಪ್ರಗತಿಯ ಕುರಿತು ಹಲವು ಸಕಾರಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ವಸಂತಿ ಹೆಚ್. ಜಿ ಅವರು ಸಭೆಯ ನೇತೃತ್ವ ವಹಿಸಿ, ಶಾಲೆಯ ಪ್ರಸ್ತುತ ಅಗತ್ಯತೆಗಳ ಬಗ್ಗೆ ಹಳೆ ವಿದ್ಯಾರ್ಥಿಗಳ ಗಮನ ಸೆಳೆದರು.

ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ  ಅಧ್ಯಕ್ಷರಾದ ವಸಂತ ಕುಲಾಲ್ ಅವರು ಉಪಸ್ಥಿತರಿದ್ದು, ಹೊಸ ಸಮಿತಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಶಾಲೆಯ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ನೂರಾರು ಹಳೆ ವಿದ್ಯಾರ್ಥಿಗಳು, ತಮ್ಮ ಮಾತೃಸಂಸ್ಥೆಯ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಂತ ನೂತನ ಅಧ್ಯಕ್ಷರಾದ ಶಿಶಿರ್ ಶೆಟ್ಟಿ ನೇತೃತ್ವದಲ್ಲಿ ಎಲ್ಲರೂ ಜೊತೆಯಾಗಿ  ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಪಣ ತೊಟ್ಟರು.



ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ವಸಂತಿ ಎಚ್. ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಕುಲಾಲ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸದಸ್ಯರಿಗೆ ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ...

ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ.), ಉಡುಪಿಹಾಗೂ ಶ್ರೀ ಧೂಮಾವತಿ ಯುವಕ ಮಂಡಲ (ರಿ.) ನಿಟ್ಟೂರು ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ನಿಟ್ಟೂರು: ಆ. 27: ಶ್ರೀ ಧೂಮಾವತಿ ಯುವಕ ಮಂಡಲ (ರಿ.) ವಿಷ್ಣುಮೂರ್ತಿ ನಗರ, ನಿಟ್ಟೂರು, ಹಾಗೂ...

ವ್ಯಸನಮುಕ್ತ ಭಾರತ  ವಿದ್ಯಾರ್ಥಿಗಳು ಹಾಗೂ ಯುವಜನತೆಯ ಸಂಕಲ್ಪವಾಗಬೇಕು  : ಮಾಜಿ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್...