ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

21

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಹವಾಲು ಸಲ್ಲಿಸಿದರು. ಸದ್ಯ ದೆಹಲಿಯಲ್ಲಿರುವ ಶಿವಕುಮಾರ್ ಅವರು, ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ ಬಿಎಂಆರ್ ಸಿಎಲ್ ಮುಂದಾಗಿದ್ದು, ದಿನಾಂಕ 13-09-2024ರಂದು ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಿತ್ತು.
ಈ ಯೋಜನೆಯ ವೆಚ್ಚ 9,700 ಕೋಟಿ ರೂ. ಅನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ. 19-01-2026ರಂದು ಬಿಎಂಆರ್ ಸಿಎಲ್ ಮಂಡಳಿಯ 118ನೇ ಸಭೆಯಲ್ಲಿ ಸಣ್ಣ ಬದಲಾವಣೆ ಪ್ರಸ್ತಾಪ ಮಾಡಿದ್ದು, ಕೇಂದ್ರ ಸರ್ಕಾರ ಈ ಯೋಜನೆಯನ್ನು ಆರಂಭಿಸಲು ಬಿಎಂಆರ್ ಸಿಎಲ್ ಗೆ ಅನುಮತಿ ನೀಡಬೇಕು.
ಮೆಟ್ರೋ ಎರಡನೇ ಹಂತದ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಅನುಮತಿ ಈ ಯೋಜನೆಗೆ ಕೇಂದ್ರ ಸರ್ಕಾರ 21-02-2014ರಂದು 26,405.14 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮತಿ ನೀಡಿತ್ತು. 72.095 ಕಿ.ಮೀ ಉದ್ದ ಹಾಗೂ 61 ನಿಲ್ದಾಣಗಳನ್ನು ಒಳಗೊಂಡಿರುವ ಈ ಯೋಜನೆ ಅಂದಾಜು ವೆಚ್ಚ ಈಗ 40,425.02 ಕೋಟಿ ರೂ.ಗೆ ಅಂದರೆ 14,019.88 ಕೋಟಿ ರೂ. ಏರಿಕೆ ಮಾಡಲಾಗಿದ್ದು, ಆದಷ್ಟು ಬೇಗ ಈ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು.
ಮೆಟ್ರೋ ಮೂರನೇ ಎ ಹಂತಕ್ಕೆ ಅನುಮತಿ ಈ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ ಒಟ್ಟು 37.804 ಕಿ.ಮೀ (14.28 ಕಿ.ಮೀ ಸುರಂಗ ಹಾಗೂ 23.524 ಕಿ.ಮೀ ಮೇಲ್ಸೇತುವೆ) ಉದ್ದವಿದ್ದು, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕೆಲವು ಮಾರ್ಪಾಡು ಮಾಡಲಾಗಿದ್ದು, 25,999 ಕೋಟಿ ರೂ. ಅಂದಾಜು ವೆಚ್ಚದ ಪರಿಷ್ಕೃತ ಡಿಪಿಆರ್ ಅನ್ನು 29-04-2026ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು, ಆದಷ್ಟು ಬೇಗ ಇದಕ್ಕೆ ಅನುಮತಿ ನೀಡಬೇಕು. ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ ಜಾರಿಗೆ ಅನುಮತಿ ಬೆಂಗಳೂರು- ಮೈಸೂರು, ಬೆಂಗಳೂರು- ಕನಕಪುರ, ಬೆಂಗಳೂರು- ತುಮಕೂರು, ಬೆಂಗಳೂರು- ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು- ಕೋಲಾರ ನಡುವೆ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ  ಜಾರಿಗೆ ಅನುಮತಿ ನೀಡಬೇಕು.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...