ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

23

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ತಮಿಳುನಾಡು ಸಿಎಂ ವಿಜಯ್‌ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಬಳಿಕ ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.
ವಿಜಯ್ ಅವರು ಸಹ ದೇವಸ್ಥಾನದ ಸಂಪ್ರದಾಯದಂತೆ ಶರ್ಟ್ ಬಿಚ್ಚಿ, ಶಲ್ಯ ಧರಿಸಿ ದೇವಸ್ಥಾನ ಪ್ರವೇಶಿಸುವ ಮೂಲಕ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು.
ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು. ಶಕ್ತಿ ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ವಿಜಯ್‌ ದೇವಸ್ಥಾನದಿಂದ ಹೊರಟರು.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...