ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

24

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜನ್ ತಂಗದುರೈ  ಎಂಬುವರು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ.
ವಿಜಯಪುರ ಮೂಲದ ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ಅಲ್ಲದೆ ಮೂರು ಬಾರಿ ಬಲವಂತವಾಗಿ ಗರ್ಭಪಾತ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಇನ್ನು ಈ ವಿಷಯ ಪೋಷಕರಿಗೆ ತಿಳಿದ ಬಳಿಕ ವಿದ್ಯಾರ್ಥಿನಿ ತನ್ನ ಸಂಶೋಧನೆಯನ್ನು ಅರ್ಧಕ್ಕೆ ನಿಲ್ಲಿಸಿ ಮನೆಗೆ ಮರಳಿದ್ದಳು.
ಈ ಸಂಬಂಧ ಮತ್ತೊಬ್ಬ ಸಂಶೋಧನಾ ವಿದ್ಯಾರ್ಥಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ದೂರು ನೀಡಿದ್ದನು. ಅಲ್ಲದೆ ಸಂಶೋಧನೆ ಪೂರ್ಣಗೊಳಿಸಲು ಸಹಕರಿಸದೇ ವಿದ್ಯಾರ್ಥಿನಿಯನ್ನು ಮತ್ತೆ ಸಂಪರ್ಕಿಸಲು ಪ್ರಾಧ್ಯಾಪಕರು ಒತ್ತಡ ಹೇರಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಕುರಿತು ಕೆಲವು ಆಡಿಯೋ ದಾಖಲೆಗಳು ಹಾಗೂ ಇತರೆ ಸಾಕ್ಷ್ಯಗಳನ್ನೂ ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಪ್ರೊಫೆಸರ್ ಸ್ವತಃ ವಿದ್ಯಾರ್ಥಿನಿಯೊಂದಿಗಿನ ಆಪ್ತ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು ಎಂಬ ಮಾತುಗಳೂ ಕೇಳಿಬರುತ್ತಿವೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿಶ್ವವಿದ್ಯಾಲಯ ಆಡಳಿತವು ಪ್ರಾಧ್ಯಾಪಕ ದೇವರಾಜನ್ ತಂಗದುರೈ ನನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯ ಮೂಲಗಳು ತಿಳಿಸಿವೆ. ಇದು ಘಟನೆಯ ಗಂಭೀರತೆಯನ್ನು ಹೆಚ್ಚಿಸಿದೆ

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...