ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

24

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಅವರು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹಾಲು ಉತ್ಪಾದನೆ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಪಿಟಿಐ ವರದಿ ಪ್ರಕಾರ, ಅವರು ಕೇಂದ್ರ ಸರ್ಕಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಏಕೈಕ ಸಚಿವರಾಗಿದ್ದರು. ಅವರ ರಾಜ್ಯಸಭಾ ಅವಧಿ ಮೊನ್ನೆ ಜೂನ್ 21 ರಂದು ಅಂತ್ಯಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಅವರ ಜೊತೆಗೆ ಮತ್ತೊಬ್ಬ ಕೇಂದ್ರ ಸಚಿವ ರವ್ನೀತ್ ಸಿಂಗ್ ಬಿಟ್ಟು ಅವರನ್ನು ಕೂಡ ಮರುನಾಮಕರಣ ಮಾಡಲಾಗಿರಲಿಲ್ಲ, ಅವರ ಅವಧಿಯೂ ಅಂತ್ಯಗೊಂಡಿತ್ತು.
65 ವರ್ಷದ ಕುರಿಯನ್ 1980ರಲ್ಲಿ ಬಿಜೆಪಿ ಸ್ಥಾಪನೆಯಿಂದಲೇ ಪಕ್ಷದ ಸದಸ್ಯರಾಗಿದ್ದಾರೆ. ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ, ಭಾರತೀಯ ಜನತಾ ಯುವ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಕೇರಳ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. 2024ರ ಜೂನ್ 9ರಂದು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದಕ್ಕೂ ಮೊದಲು ಅವರು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...