ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಕಸರತ್ತು ಕೇಂದ್ರ ಸಚಿವ ವಿ ಸೋಮಣ್ಣಗೆ ಒಲಿಯಲಿದೆಯೇ ರಾಜ್ಯಾಧ್ಯಕ್ಷ ಸ್ಥಾನ

13

ಬೆಂಗಳೂರು: ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದೆ. ಆರಂಭದಿಂದಲೂ ಸಹ ವಿರೋಧಿ ಬಣ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದೆ. ಈ ನಡುವೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಣ್ಣ, ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್ ಸಂದೇಶಕ್ಕೆ ಬದ್ಧ. ಅಮಿತ್ ಶಾ ವರುಣದಲ್ಲಿ ಸ್ಪರ್ಧಿಸು ಎಂದಿದ್ದಕ್ಕೆ ಅಲ್ಲಿ ಸ್ಪರ್ಧಿಸಿದ್ದೆ. ತುಮಕೂರಿನಲ್ಲಿ ಸ್ಪರ್ಧೆ ಮಾಡು ಎಂದರು, ಅಲ್ಲಿ ಸ್ಪರ್ಧಿಸಿ ಗೆದ್ದೆ ಎಂದರು. ಹೈಕಮಾಂಡ್ ಏನು ಹೇಳುತ್ತದೋ ಅದನ್ನು ನಾನು ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಜವಾಬ್ದಾರಿ ತೆಗೆದುಕೊಳ್ಳಲು ಸಿದ್ದ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಹುದ್ದೆಗಳ ಬದಲಾವಣೆ ನಂತರ ಬಿಜೆಪಿಯಲ್ಲಿಯೂ ಸಹ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಕೇಂದ್ರ ಸಚಿವ ಸೋಮಣ್ಣ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆಈ ಸಂಬಂಧ ರಾಜ್ಯ ಸಚಿವ ಸೋಮಣ್ಣ ಅವರು ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯ ಸಚಿವ ಸೋಮಣ್ಣ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ವಿಜಯೇಂದ್ರ ಅವರನ್ನು ಬದಲಿಸಲು ಅವರೇ ಸರಿಯಾದ ಅಭ್ಯರ್ಥಿ ಎಂದು ಬಿಜೆಪಿ ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.

Leave a comment

Leave a Reply

Your email address will not be published. Required fields are marked *

Related Articles

ಅಧಿಕಾರ ದುರುಪಯೋಗ ಹಿಂದೂ ಕಾರ್ಯಕರ್ತನ ಬಂಧನ ಸಂಬಂಧ ಎಸಿಪಿ ರೀನಾ ಸುವರ್ಣ ಮತ್ತು ಡಿಸಿಪಿಗೆ ಗಂಭೀರ ಎಚ್ಚರಿಕೆ ನೀಡಿದ ಹೈ ಕೋರ್ಟ್ ನ್ಯಾಯಾಧೀಶರು

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಯೋಜನೆಗೊಂಡಿದ್ದ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಶೋ ರದ್ದು ಮಾಡುವಂತೆ ಹಿಂದೂ...

ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ ಕೂಗಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಗೈದ ಮುಸ್ಲಿಂ ಪುಂಡರು

“ಬೆಂಗಳೂರು: ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ...

ರೈತರಿಗೆ ನೀಡುತ್ತಿರುವ ಬೆಳೆ ಸಾಲ ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂ ಗೆ ಏರಿಕೆ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತ ಸದಸ್ಯರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲಮಿತಿಯನ್ನು 5...

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಶಾಸಕಾಂಗ ಪಕ್ಷದ ಸಭೆಗೆ ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರ ಗೈರು

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲ ಕಾಂಗ್ರೆಸ್...