ಆಸ್ಟ್ರೇಲಿಯಾ ಭೇಟಿಗೂ ಮುನ್ನ ಭಾರತ ಪ್ರಧಾನಿ  ನರೇಂದ್ರ ಮೋದಿರವರಿಗೆ  ಕೊಲೆ ಬೆದರಿಕೆ ಪೋಸ್ಟ್

18

“ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೆಲ್ಬೋರ್ನ್ ಭೇಟಿಗೂ ಮುನ್ನ ಅವರಿಗೆ ಆನ್‌ಲೈನ್‌ ಮೂಲಕ ಕೊಲೆ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಆಸ್ಟ್ರೇಲಿಯಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಶನಿವಾರ ವರದಿಯಾಗಿದೆ.

ಆಸ್ಟ್ರೇಲಿಯಾ ಟುಡೇ ವರದಿಗಳ ಪ್ರಕಾರ, ಜುಲೈ 9 ರಂದು ಮಾರ್ವೆಲ್ ಕ್ರೀಡಾಂಗಣದಲ್ಲಿ ನಡೆಯಲಿರುವ “ಮೆಲ್ಬೋರ್ನ್ ನೀಡ್ಸ್ ಮೋದಿ” ಎಂಬ ಕಾರ್ಯಕ್ರಮವನ್ನು ಪ್ರಚಾರ ಮಾಡುವ ಫೇಸ್‌ಬುಕ್ ಪೋಸ್ಟ್‌ನ ಕಾಮೆಂಟ್‌ಗಳ ವಿಭಾಗದಲ್ಲಿ ಮೋದಿಗೆ ಕೊಲೆ ಬೆದರಿಕೆಯ ಪೋಸ್ಟ್ ಮಾಡಲಾಗಿದೆ.

ಈ ಕಾಮೆಂಟ್ ಅನ್ನು ಅಬು ಮುಸ್ತಫಾ ಎಂಬ ಹೆಸರಿನ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಆರೋಪಿ ತನ್ನ ಕಮೆಂಟ್ನಲ್ಲಿ ಈ ಕಾರ್ಯಕ್ರಮದ ಸಮಯದಲ್ಲಿ ಕ್ರೀಡಾಂಗಣದ ಛಾವಣಿ ಮುಚ್ಚುವುದು ಉತ್ತಮ, ಇಲ್ಲದಿದ್ದರೆ ಅವರು ಪ್ರಧಾನಿ ಸಾಯುವುದಕ್ಕಾಗಿ ಆಸ್ಟ್ರೇಲಿಯಾಗೆ ಬರುತ್ತಾರೆ ಎಂದು ಎಚ್ಚರಿಸಿದ್ದಾನೆ. ತಕ್ಷಣ ಕಾರ್ಯಕ್ರಮದ ಸಂಘಟಕರು ಕಮೆಂಟ್ ಬಗ್ಗೆ ಆಸ್ಟ್ರೇಲಿಯನ್ ಫೆಡರಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ಕೊಲೆ ಬೆದರಿಕೆ ಕಾಮೆಂಟ್ ಹಾಕಿದ ಆರೋಪಿಯ ಸಾಮಾಜಿಕ ಐಪಿ ವಿಳಾಸವನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಗಳು ತಿಳಿಸಿವೆ. ಇನ್ನೂ ತನಿಖೆಯ ಬಗ್ಗೆ ಆಸ್ಟ್ರೇಲಿಯಾದ ಫೆಡರಲ್ ಪೊಲೀಸರು ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆರೋಪಿಗೆ ಸಂಬಂಧಿಸಿದ ಐಪಿ ವಿಳಾಸವನ್ನು ಗುರುತಿಸಿದ್ದಾರೆ. ಮತ್ತು ಸಂದೇಶದ ಸುತ್ತಲಿನ ಸಂದರ್ಭಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಐಆರ್ ಮತದಾರ ಪಟ್ಟಿ ಪರಿಷ್ಕರಣೆ ಮೂರು ರಾಷ್ಟ್ರಗಳಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಯಭಾರಿ ಹೆಸರು ನಾಪತ್ತೆ

ನವದೆಹಲಿ: ಯುಎಇ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇಶದ ಮಾಜಿ ರಾಯಭಾರಿಯೊಬ್ಬರು...

ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಲಡಾಖ್‌ನ ಜನರಿಗಾಗಿ ಕೇಂದ್ರ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಲಡಾಖ್‌ನಲ್ಲಿ ಜಮ್ಮು...

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...