ಐಬಿ ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ತಾಹೀರ್ ಹುಸೇನ್ ದೋಷಿ

14

ದೆಹಲಿ: 2020ರ ದೆಹಲಿ ಸಿಎಎ ಗಲಭೆಯ ವೇಳೆ ಇಂಟೆಲಿಜೆನ್ಸ್ ಬ್ಯೂರೋ  ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯವು ಆಮ್ ಆದ್ಮಿ ಪಕ್ಷದ  ಮಾಜಿ ನಾಯಕ ತಾಹೀರ್ ಹುಸೇನ್ ಮತ್ತು ಇತರ ನಾಲ್ವರು ಪ್ರಮುಖ ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಏನಿದು ಪ್ರಕರಣ? ಫೆಬ್ರವರಿ 2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಗಲಭೆಯ ಸಂದರ್ಭದಲ್ಲಿ, ಫೆಬ್ರವರಿ 25 ರಂದು ದಿನಸಿ ಸಾಮಗ್ರಿಗಳನ್ನು ಖರೀದಿಸಿ, ಮನೆಗೆ ಮರಳುತ್ತಿದ್ದ 26 ವರ್ಷದ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಚಾಂದ್ ಬಾಗ್ ಪ್ರದೇಶದಲ್ಲಿ ಉದ್ರಿಕ್ತ ಗಲಭೆಕೋರರ ಗುಂಪು ಅಪಹರಿಸಿ, ಬರ್ಬರವಾಗಿ ಕೊಲೆ ಮಾಡಿ ಶವವನ್ನು ಹತ್ತಿರದ ಚರಂಡಿಗೆ ಎಸೆದಿತ್ತು. ತನಿಖೆಯ ವೇಳೆ ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಮನೆಯನ್ನು ಗಲಭೆಕೋರರು ಕಲ್ಲು ತೂರಾಟ ನಡೆಸಲು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಬಳಸಿದ್ದರು ಎಂಬುದು ಸಾಬೀತಾಗಿತ್ತು.
ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪ್ರವೀಣ್ ಸಿಂಗ್ ಅವರ ಪೀಠವು, ತಾಹೀರ್ ಹುಸೇನ್‌ನನ್ನು ಕೊಲೆ, ಅಪಹರಣ, ದಂಗೆ ಮತ್ತು ಧರ್ಮಗಳ ನಡುವೆ ದ್ವೇಷ ಸೇರಿದಂತೆ ಹಲವು ಗಂಭೀರ ಕಾಯ್ದೆಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಹುಸೇನ್ ಜೊತೆಗೆ ಇತರ 4 ಆರೋಪಿಗಳಾದ ನಾಜಿಮ್, ಕಾಸಿಮ್, ಅನಾಸ್ ಮತ್ತು ಜಾವೇದ್ ಅವರನ್ನೂ ನ್ಯಾಯಾಲಯ ದೋಷಿಗಳು ಎಂದು ಪರಿಗಣಿಸಿದೆ.
ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿದ್ದ ಇತರ 6 ಜನರನ್ನು ಖುಲಾಸೆಗೊಳಿಸಲಾಗಿದೆ. ಏತನ್ಮಧ್ಯೆ,ಸಿಎಎ ವಿರೋಧಿ ಗಲಭೆಯ ವೇಳೆ ಒಟ್ಟು 53 ಜನರು ಪ್ರಾಣ ಕಳೆದುಕೊಂಡಿದ್ದರು. ಮತ್ತು ನೂರಾರು ಜನರು ಗಾಯಗೊಂಡಿದ್ದರು

Leave a comment

Leave a Reply

Your email address will not be published. Required fields are marked *

Related Articles

ಆಂಜನೇಯ ದೇವಸ್ಥಾನ ಅಕ್ರಮ ಪ್ರವೇಶ ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಬಂಧನ

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ...

ರಾಜ್ಯ ಪೊಲೀಸ್ ಇಲಾಖೆಯ 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರತಿಷ್ಠಿತ ಪ್ರಶಸ್ತಿ ‘ರಾಷ್ಟ್ರಪತಿ ಪದಕ-2026’

ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್...

ಪ್ರವಚನದ ನಡುವೆ ಸಚಿವಈಶ್ವರ ಖಂಡ್ರೆಗೆ ಜೈಕಾರ ಪ್ರವಚನ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಸ್ವಾಮೀಜಿ

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಮಹಾಸ್ವಾಮಿಗಳು ತೀವ್ರ ಮುಜುಗರ ಅನುಭವಿಸಿದರು....

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...