ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಗೆ ಪಯಣ: ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ

15
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬುಧವಾರ ಅಪರಾಹ್ನ ದೆಹಲಿಗೆ ತೆರಳಿದ್ದು ಬೆಂಗಳೂರಿಗೆ ಯಾವಾಗ ಹಿಂತಿರುಗುತ್ತಾರೆ ಎಂದು ಸ್ಪಷ್ಟವಾಗಿ ನಿಗದಿಯಾಗದಿರುವುದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹೊಸ ಊಹಾಪೋಹಗಳಿಗೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಕಚೇರಿ ನೀಡಿರುವ ಮಾಹಿತಿಯಂತೆ, ಡಿ.ಕೆ. ಶಿವಕುಮಾರ್ ಅವರು ಇಂದು ಅಪರಾಹ್ನ 3.45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದು ಸಾಯಂಕಾಲ ದೆಹಲಿ ತಲುಪಲಿದ್ದಾರೆ.


ಅಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡುವ ಕಾರ್ಯಕ್ರಮ ಹೊಂದಿದ್ದು, ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮುಖ್ಯಮಂತ್ರಿಯವರ ಈ ಭೇಟಿ ಸಚಿವಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಪ್ರಸ್ತುತ ಮುಖ್ಯಮಂತ್ರಿ ಸೇರಿದಂತೆ ಕೇವಲ 14 ಸಚಿವರೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 20 ಸಚಿವ ಸ್ಥಾನಗಳು ಖಾಲಿ ಇವೆ.

ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಮರಳಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜುಲೈ 18ರಂದು ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಇದರಿಂದ ಕಾಂಗ್ರೆಸ್ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಒಪ್ಪಿಗೆ ನೀಡಿರುವ ಸೂಚನೆ ಸಿಗಬಹುದು ಎಂದು ಪಕ್ಷದ ವಲಯಗಳು ಹೇಳುತ್ತಿವೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಸಚಿವ ಸ್ಥಾನಕ್ಕೆ ಪರಿಗಣಿಸಬೇಕಾದವರ ಪಟ್ಟಿಯನ್ನು ಈಗಾಗಲೇ ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೂ ಹೈಕಮಾಂಡ್ ಒಪ್ಪಿಗೆ ನೀಡಿದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಶೀಘ್ರದಲ್ಲೇ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜಕೀಯ ಹಾಗೂ ಪ್ರಾದೇಶಿಕ ಸಮತೋಲನ ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆಗೆ ಮಹತ್ವ ನೀಡುತ್ತಿದೆ. ಪಕ್ಷದ 45ಕ್ಕೂ ಹೆಚ್ಚು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಪೈಪೋಟಿಯಲ್ಲಿದ್ದು, ಕಳೆದ ಕೆಲವು ದಿನಗಳಿಂದ ಬೆಂಗಳೂರು ಮತ್ತು ದೆಹಲಿಯಲ್ಲಿ ತೀವ್ರ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪಕ್ಷದ ಮೂಲಗಳ ಪ್ರಕಾರ, ರಾಜ್ಯ ನಾಯಕತ್ವ ಮತ್ತು ಕಾಂಗ್ರೆಸ್ ಹೈಕಮಾಂಡ್ ನಡುವಿನ ಸಮಾಲೋಚನೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಜುಲೈ 20ರೊಳಗೆ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ 40 ದಿನಗಳು ಕಳೆದಿದ್ದರೂ ಸಚಿವ ಸಂಪುಟ ವಿಸ್ತರಣೆ ಬಾಕಿ ಉಳಿದಿದೆ. ಇದೀಗ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನಡೆಯುವ ಚರ್ಚೆಯ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಆಗಸ್ಟ್ ಮೊದಲ ವಾರದಲ್ಲಿ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ, ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಾಗಿದೆ.
ಸಿದ್ದರಾಮಯ್ಯ ಸಹ ದೆಹಲಿಗೆ ಪಯಣ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಇಂದು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಬಂದಿದ್ದು ಹೈಕಮಾಂಡ್ ಸಿಎಂ ಮತ್ತು ಮಾಜಿ ಸಿಎಂ ಅವರ ಸಮ್ಮುಖದಲ್ಲಿ ಇನ್ನೆರಡು ದಿನಗಳೊಳಗೆ ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆಯೊತ್ತುವ ಸಾಧ್ಯತೆಯಿದೆ

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...