ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

21
ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್‌ನ ಇತರೆ ನಾಯಕರು ಇಂದು ಮಧ್ಯಾಹ್ನ ಬೆಂಗಳೂರಿಗೆ ಮರಳಿದ್ದಾರೆ.


ಇಂದು ಬೆಳಗ್ಗೆ ಸಿದ್ದರಾಮಯ್ಯನವರು ತಮ್ಮ ಆಪ್ತರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಮಹತ್ವದ ಬದಲಾವಣೆಗೆ ಒತ್ತು ನೀಡಿದ್ದು, ಈ ಬಾರಿ ಹೊಸ ಮುಖಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ
ಖಾಲಿ ಇರುವ 20 ಸಚಿವ ಸ್ಥಾನಗಳಲ್ಲಿ ಸುಮಾರು 60 ಶೇಕಡಾ ಸ್ಥಾನಗಳನ್ನು ಹಿಂದುಳಿದ ವರ್ಗ  ಪರಿಶಿಷ್ಟ ಜಾತಿ  ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡುವ ಸಾಧ್ಯತೆ ಇದೆ. ಅಲ್ಲದೆ, ಹೊಸ ಸಚಿವರ ಪೈಕಿ ಸುಮಾರು 70 ಶೇಕಡಾ ಮಂದಿ ಮೊದಲ ಬಾರಿಗೆ ಸಚಿವರಾಗಲಿದ್ದು, ಕನಿಷ್ಠ ಇಬ್ಬರು ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.

ಮೊದಲ ಸುತ್ತಿನ ಸಭೆಯಲ್ಲಿ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್, ಈ ಮಾನದಂಡಗಳಿಗೆ ಅನುಗುಣವಾಗಿ ಸಚಿವರ ಪಟ್ಟಿಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದರು. ಇದೇ ವೇಳೆ, ಹಳೆ ಹೆಸರನ್ನೇ ತಂದರೆ ಹೊಸತನ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಇಂದು ಬೆಳಗ್ಗೆ ಸಿಎಂ-ಮಾಜಿ ಸಿಎಂ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆ ಗಂಭೀರ ಚರ್ಚೆ ಇದಾದ ಬಳಿಕ ಉಭಯ ನಾಯಕರು ಪರಿಷ್ಕೃತ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮರಳಿದ ಬಳಿಕ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...