ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

14

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಅಲ್ಲದೆ ರೈತರ ಹೋರಾಟ ಸಹ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಅವರಿಗೆ ಸೇರಿದ ಭೂಮಿಗೂ ಅಂತಿಮ ಅಧಿಸೂಚನೆ ಹೊರಡಿಸಿದೆ. ಇತ್ತೀಚಿಗೆ ಬಿಡದಿ ಟೌನ್‌ಶಿಪ್ ವ್ಯಾಪ್ತಿಯ 4 ಕಂದಾಯ ಗ್ರಾಮಗಳಾದ ಬನ್ನಿಗಿರಿ, ಅರಳಾಳುಸಂದ್ರ, ಕೆ.ಜಿ.ಗೊಲ್ಲರಪಾಳ್ಯ, ಹೊಸೂರು ಗ್ರಾಮಗಳ ಜಮೀನು ಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ಎರಡನೇ ಹಂತದ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದ ಭೂಮಿಯೂ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ವ್ಯಾಪ್ತಿಗೆ ಒಳಪಟ್ಟಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ಎಚ್‌ಡಿಕೆ ಕುಟುಂಬದ ಭೂ ದಾಖಲೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದು, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳ ಸರ್ವೇ ನಂಬರ್‌ಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಒಟ್ಟು 35 ಎಕರೆ ಜಮೀನು ಈ ಯೋಜನೆಗೆ ಒಳಪಟ್ಟಿದೆ. ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿರುವ 31 ಎಕರೆ ಜಮೀನು, ನಿಖಿಲ್ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 4 ಎಕರೆ ಜಮೀನಿಗೂ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಹೊಸೂರಿನ 2,390 ಎಕರೆ 12 ಗುಂಟೆ, ಕೆಜಿ ಗೊಲ್ಲರಪಾಳ್ಯದ ಒಟ್ಟು 315 ಎಕರೆ 36 ಗುಂಟೆ, ಬನ್ನಿಗಿರಿ ಗ್ರಾಮದ 775 ಎಕರೆ 8 ಗುಂಟೆ, ಅರಳಾಳುಸಂದ್ರದ 1,460 ಎಕರೆ 21 ಗುಂಟೆ ಜಮೀನು ಭೂಸ್ವಾಧೀನಕ್ಕೊಳಪಟ್ಟಿದೆ ಎಂದು ನಗರಾಭಿವೃದ್ಧಿ ಇಲಾಖೆ(ಬಿಡಿಎ ಮತ್ತು ಬೆಂಗಳೂರು-1)ಯ ಅಧೀನ ಕಾರ್ಯದರ್ಶಿ ರಾಜೇಶ್ ಎಸ್.ಸೂಳಿಕೇರಿ ಅವರು ಆದೇಶ ಹೊರಡಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...