ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯದ ಮಿತಿ, 3 ಲಕ್ಷ ನಿಗದಿಗೆ ಕ್ರಮ- ಸಚಿವ ಕೆ ಹೆಚ್ ಮುನಿಯಪ್ಪ

17
ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಭಾನುವಾರ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ‌ ಅನುಷ್ಠನಾ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪಡಿರ ಕಾರ್ಡ್‌ಗಳ ಪರಿಶೀಲನೆ ನಡೆಯುತ್ತಿದ್ದು, ಯಾವುದೇ ಕಾರ್ಡ್ ರದ್ದು ಪಡಿಸಲ್ಲ, ಅನರ್ಹ ಕಾರ್ಡ್ ಗಳನ್ನು ಎಪಿಎಲ್ ಗೆ ವರ್ಗಾಯಿಸಲಾಗುತ್ತಿದೆ ಎಂದರು.


ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ 1ಲಕ್ಷ20 ಸಾವಿರ ವಾರ್ಷಿಕ ಆದಾಯದ ಮಿತಿಯನ್ನು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಸ್ಸಿನಂತೆ 3ಲಕ್ಷರೂಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಆಹಾರ ಇಲಾಖೆಯು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಅನ್ನಭಾಗ್ಯ ಯೋಜನೆಯ ಮೂಲಕ ರಾಜ್ಯದಲ್ಲಿ ಸುಮಾರು 4.42ಕೋಟಿ ಫಲಾನುಭವಿಗಳಿಗೆ 10ಕೆಜಿ ಪಡಿತರ ವಿತರಣೆ ಮಾಡುತ್ತಿದ್ದೇವೆ. ಪಡಿತರ ವಿತರಣೆಯಲ್ಲಿ ಕಾಳಸಂತೆಯನ್ನು ತಡೆಯಲು ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಜಿಪಿಎಸ್ ನಿಗಾ ವಹಿಸಲಾಗುತ್ತಿದೆ. ಕಾಳಸಂತೆಗೆ ಮಾರಾಟವಾಗುವ ಪಡಿತರ ಅಕ್ರಮ ತಡೆಯಲು ಸುಮಾರು 1,497 FIR ಪ್ರಕರಣಗಳನ್ನು ದಾಖಲಿಸಿದ್ದು ,50 ಕೋಟಿರೂಗಳ ಪಡಿತರ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ಎಂಎಸ್ ಪಿ ಯೋಜನೆಯಡಿ (5.60 LMT) ಐದು ಲಕ್ಷದ 60 ಸಾವಿರ ಲ್ಯಾಕ್ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಿದ್ದು ಅದನ್ನು ಶುದ್ದೀಕರಿಸಿ ಗ್ರಾಹಕರಿಗೆ ವಿತರಣೆ ಮಾಡಲಾಗುತ್ತಿದೆ. ಇಂದಿರಾ ಕಿಟ್ ನೀಡಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಕಿಟ್ ವಿತರಣೆಗೆ ಕಾರ್ಯರೂಪಿಸುತ್ತಿದ್ದೇವೆ. ಇದಕ್ಕೆ ಸುಮಾರು 6,000 ಕೋಟಿ ರೂಗಳು ವೆಚ್ಚವಾಗಲಿದ್ದು ಬಹಳ ಸೂಕ್ಷ್ಮವಾಗಿ ನಡೆಸಬೇಕಾಗುತ್ತಿರುವುದರಿಂದ ಸ್ವಲ್ಪ ವಿಲಂಭವಾಗುತ್ತಿದೆ ಆದಷ್ಟು ಬೇಗ ಈ ಪ್ರಕ್ರಿಯೆಯು ಅಂತಿಮವಾಗಲಿದೆ ಎಂದರು.
14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆ.ಎಚ್ ಮುನಿಯಪ್ಪ ಸುಳಿವು ರಾಜ್ಯದಾದ್ಯಂತ ಇರುವ 20259 ನ್ಯಾಯಬೆಲೆ ಅಂಗಡಿಗಳಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಗ್ಯಾರಂಟಿ ಯೋಜನೆಯ ಅಧ್ಯಕ್ಷರ ಭಾವಚಿತ್ರ ಹಾಗೂ ಅವರ ದೂರವಾಣಿ ಸಂಖ್ಯೆಯನ್ನು ಅಳವಡಿಸಲು ಚರ್ಚಿಸಲಾಯಿತು.
ನ್ಯಾಯಬೆಲೆ ಅಂಗಡಿಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೂ ತರೆದು ಪಡಿತರ ವಿತರಿಸಲು ಸೂಚಿಸಲಾಗಿದ್ದು ತಪ್ಪಿದ್ದಲ್ಲಿ ಇಲಾಖೆಯ ಸಹಾಯವಾಣಿ ಸಂಖ್ಯೆ 1967 ಸಹಾಯವಾಣಿಗೆ ಕರೆಮಾಡಿ ದೂರು ನೀಡಬಹುದಾಗಿದೆ. ಬೆಂಗಳೂರು ನಗರದಲ್ಲಿನ ನ್ಯಾಯಬೆಲೆ ಅಂಗಡಿಗಳು ಹಾಗೂ ಅಧಿಕಾರಿಗಳ ಮೇಲೆ ಬಂದ ದೂರುಗಳ ಮೇಲೆ ತ್ವರಿತ ಕ್ರಮ ಕೈಗೊಳ್ಳಲು ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್...

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ...