ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

9

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ ಸಿಜೆಪಿಗೆ ಕಾನೂನು ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ ಎಂದು ಕಬಿಲ್ ಸಿಬಲ್ ಅವರು ತಿಳಿಸಿದ್ದಾರೆ. ಇಂದು ಸಿಜೆಪಿ ವಕ್ತಾರ ಸೌರವ್ ದಾಸ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಪಿಲ್ ಸಿಬಲ್ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದನ್ನು ತಡೆಯಲು ಮತ್ತು ಅವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿ ಹೇಳಿದ್ದಾರೆ.
ಪ್ರತಿಭಟನಾಕಾರರ ಮೇಲೆ ಎಲ್ಲಿ, ಏನು ಕ್ರಮ ಜರುಗಿಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಸಿಜೆಪಿ ಒಂದು ಬಲವಾದ ಚೌಕಟ್ಟನ್ನು ರೂಪಿಸಲಿದೆ. ಉಚಿತವಾಗಿ ಕಾನೂನು ನೆರವು ನೀಡಲು ಬಯಸುವ ವಕೀಲರು ತಮ್ಮ ಹೆಸರು, ಸ್ಥಳ ಹಾಗೂ ಸಹಾಯದ ವಿವರಗಳನ್ನು ನೋಂದಾಯಿಸಿಕೊಳ್ಳಲು ಪ್ರತ್ಯೇಕ ವೆಬ್‌ಸೈಟ್ ತೆರೆಯಲಾಗುವುದು ಎಂದು ತಿಳಿಸಿದರು. ಎಲ್ಲೆಲ್ಲಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತದೆಯೋ, ಅಲ್ಲೆಲ್ಲಾ ನಾವು ಅವರ ಪರವಾಗಿ ನಿಲ್ಲುತ್ತೇವೆ. ದೇಶಾದ್ಯಂತ ನಮ್ಮ ವಕೀಲರು ಅವರಿಗೆ ಬೆಂಬಲ ನೀಡಲಿದ್ದಾರೆ. ನಾನು ಈ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದು, ದೇಶದ ಇತರ ವಕೀಲರು ಹಾಗೂ ಸಾರ್ವಜನಿಕರು ಸಹ ದೇಣಿಗೆ ನೀಡಬೇಕಾಗಿ ವಿನಂತಿಸುತ್ತೇನೆ ಎಂದು ಕಪಿಲ್ ಸಿಬಲ್ ಮನವಿ ಮಾಡಿದರು.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...