ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

1

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಂಘಟನಾ ಬದಲಾವಣೆಗೆ ಮುಂದಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ನೇರವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಹೈಕಮಾಂಡ್, ಆಯ್ಕೆ ಕುರಿತ ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಕೈಗೊಳ್ಳಲಿದ್ದಾರೆ.
ದೇಶವ್ಯಾಪಿ ನಡೆಯುತ್ತಿರುವ ‘ಸಂಘಟನ್ ಸೃಜನ ಅಭಿಯಾನ’  ಅಡಿಯಲ್ಲಿ ಎಐಸಿಸಿ ವೀಕ್ಷಕರು ಜಿಲ್ಲಾ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷ ಸ್ಥಾನಾಕಾಂಕ್ಷಿಗಳು ಹಾಗೂ ಮುಖಂಡರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಜಿಲ್ಲಾವಾರು ಸಿದ್ಧವಾಗುವ ವರದಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗುತ್ತದೆ ಎಂದು ತುಮಕೂರು ಜಿಲ್ಲೆಯ ವೀಕ್ಷಕಿ ಸಂಗೀತಾ ಬೆನಿವಾಲ್ ತಿಳಿಸಿದ್ದಾರೆ. ಈ ಅಭಿಯಾನ ದೇಶದಾದ್ಯಂತ ನಡೆಯುತ್ತಿದ್ದು, ಕರ್ನಾಟಕದಲ್ಲಿ ಆಗಸ್ಟ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಡಿಸಿಸಿ ಅಧ್ಯಕ್ಷರ ನೇಮಕದ ಕುರಿತು ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಸೇರಿ ಕೈಗೊಳ್ಳಲಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಂಸದ ಡಿ.ಕೆ. ಸುರೇಶ್, “ಕಾಂಗ್ರೆಸ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಂಬುವ ಪಕ್ಷವಾಗಿದೆ. ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ಡಿಸಿಸಿ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ರಾಹುಲ್ ಗಾಂಧಿ ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ನ ವೀಕ್ಷಕರಾಗಿರುವ ಚಾಂಡಿ ಉಮ್ಮನ್ ಅವರೊಂದಿಗೆ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನಾ ಸಭೆಗಳಲ್ಲಿ ಭಾಗವಹಿಸಿದ್ದ ಡಿ.ಕೆ. ಸುರೇಶ್, “ಡಿಸಿಸಿ ಅಧ್ಯಕ್ಷರಾಗಲು ಆಸಕ್ತಿ ಇರುವವರು ಸ್ವತಃ ಅರ್ಜಿ ಸಲ್ಲಿಸಬಹುದು. ಕೆಪಿಸಿಸಿ ಅಧ್ಯಕ್ಷರು ಅಥವಾ ಹಿರಿಯ ನಾಯಕರು ಯಾರ ಹೆಸರನ್ನೂ ಶಿಫಾರಸು ಮಾಡುವುದಿಲ್ಲ. ಆಸಕ್ತರು ನೇರವಾಗಿ ಅರ್ಜಿ ಸಲ್ಲಿಸಬೇಕು,” ಎಂದು ಸ್ಪಷ್ಟಪಡಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ:ಶಾಸಕಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ...

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...