ರೇಣುಕಾಸ್ವಾಮಿ ಪ್ರಕರಣ ನಟ ದರ್ಶನ್ ಗೆ ಸಂಕಸ್ಟ ಆರೋಪಿ ಪ್ರದೋಷನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಕೋರ್ಟ್ ಅನುಮತಿ

2

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸಿದೆ. ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು, ಪ್ರಕರಣ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ದೊಡ್ಡ ತಿರುವು ಪಡೆದುಕೊಂಡಿದೆ. ಹೀಗಾಗಿ ಜೈಲಿನಲ್ಲಿರುವ ನಟ ದರ್ಶನ್, ಹಾಗೂ ಪವಿತ್ರಾ ಗೌಡ ಅವರಿಗೆ ಭಾರೀ ಟೆನ್ಶನ್ ಶುರುವಾಗಿದೆ

ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿ(ಮಾಫಿ ಸಾಕ್ಷಿ)ಯಲ್ಲಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಜಯನಗರದ ಮೈದಾನದಲ್ಲಿ ದರ್ಶನ್ ಪರಿಚಯವಾದ ದಿನದಿಂದ ಹಿಡಿದು ಜೈಲು ಪಾಲಾಗುವವರೆಗಿನ ಇಡೀ ಘಟನಾವಳಿಯನ್ನು ಎಳೆಎಳೆಯಾಗಿ ಸಿಸಿಎಚ್-59 ನ್ಯಾಯಾಧೀಶರ ಮುಂದೆ ಪ್ರದೋಷ್ ಬಿಚ್ಚಿಟ್ಟಿದ್ದಾನೆ ಮಹತ್ವದ ಬೆಳವಣಿಗೆಯೊಂದರಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು 59ನೇ ಸಿಸಿಹೆಚ್‌ ನ್ಯಾಯಾಲಯ ಸಮ್ಮತಿ ನೀಡಿದೆ. ಈ ಹಿಂದೆ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಪ್ರಾಸಿಕ್ಯೂಷನ್‌ ಒಪ್ಪಿಗೆ ನೀಡಿತ್ತು. ಆದರೆ ದರ್ಶನ್‌ ಪರ ವಕೀಲರು ಇದನ್ನು ವಿರೋಧಿಸಿದ್ದರು. ಇದೀಗ ನ್ಯಾಯಾಲಯವೇ ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಪುರಸ್ಕರಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಕೆಪಿಎಸ್ ಸಿ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿ ಸೋರಿಕೆ ಇಬ್ಬರು ಸಿಬ್ಬಂದಿಗಳ ಬಂಧನ

ಬೆಂಗಳೂರು: ಸದಾ ಅಕ್ರಮಗಳಿಂದಲೇ ಸದ್ದು ಮಾಡುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ)ದ ನೇಮಕಾತಿ ಪ್ರಕ್ರಿಯೆಯಲ್ಲಿ ಈಗ...

ರಾಜ್ಯ ಸಚಿವ ಸಂಪುಟ ಕೋಟಿ ಕೋಟಿ ಮಾತುಕತೆಯ ಆಡಿಯೋಬಿಡುಗಡೆ ಮಾಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ ವಿಸ್ತರಣೆಯಾಗಿದ್ದು, 19...

ಕೊನೆ ಕ್ಷಣಗಳಲ್ಲಿ ಬದಲಾದ ಸಚಿವ ಸಂಪುಟ 20 ನೂತನ ಸಚಿವರ ಬದಲು 19 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

“ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್...

ಕಾವೇರಿ ನೀರು ಹಂಚಿಕೆ ಸರ್ವಪಕ್ಷ ಸಭೆ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ::ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ...