ರಾಜ್ಯ ಪೊಲೀಸ್ ಇಲಾಖೆಯ 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರತಿಷ್ಠಿತ ಪ್ರಶಸ್ತಿ ‘ರಾಷ್ಟ್ರಪತಿ ಪದಕ-2026’

1

ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ಸಿಸಿಬಿಯ  ಸಹಾಯಕ ಪೊಲೀಸ್ ಕಮಿಷನರ್  ಹೆಚ್.ಎನ್. ಧರ್ಮೇಂದ್ರ ಅವರಿಗೆ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವಕ್ಕೆ ಪಾತ್ರರಾಗಿದ್ದಾರೆ. ಕರ್ನಾಟಕದ ಪೊಲೀಸ್ ಸೇವೆಯಲ್ಲಿ ಒಬ್ಬರಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ  ಹಾಗೂ 17 ಮಂದಿಗೆ ಪೊಲೀಸ್ ಪದಕ ಫಾರ್ ಮೆರಿಟೋರಿಯಸ್ ಸರ್ವಿಸ್ ಲಭಿಸಿದೆ.ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿರುವ ಪಟ್ಟಿಯ ಪ್ರಕಾರ, ಕರ್ನಾಟಕದ ಪರವಾಗಿ ಧರ್ಮೇಂದ್ರ ಹುಚ್ಚ ನಂಜಪ್ಪ ಕಲ್ಲೇಗೌಡನಕೊಪ್ಪಲು, ಸಹಾಯಕ ಪೊಲೀಸ್ ಆಯುಕ್ತರಿಗೆ ವಿಶಿಷ್ಟ ಸೇವಾ ಪದಕ ದೊರೆತಿದೆ. ಅದೇ ರೀತಿ ಸಾರಾ ಫಾತಿಮಾ, ಮಹದೇವ ಟಿ., ಶಣ್ಮುಘ ವರ್ಮ ಕೆ., ಬಾವುದ್ದೀನ್ ರುಕ್ಮುದ್ದೀನ್ ಗಡ್ಡೇಕರ್, ಪ್ರಮಾಣದ್ ಪಿ. ಘೋಡಕೆ ಮತ್ತು ಥಾಮಸ್ ಮ್ಯಾಥ್ಯೂ ಪಿ.ಎಂ. ಸೇರಿದಂತೆ 17 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಶ್ಲಾಘನೀಯ ಸೇವಾ ಪದಕ ಪುರಸ್ಕೃತರ ಪಟ್ಟಿ ಇಂತಿದೆ ಸಾರಾ ಫಾತಿಮಾ – ಎಸ್ಪಿ ರೈಲ್ವೇಸ್, ಬೆಂಗಳೂರು ಥಾಮಸ್ ಮ್ಯಾಥ್ಯೂ – ಕಮಾಂಡೆಂಟ್, ಕೆ.ಎಸ್.ಆರ್.ಪಿ  ಮಹಾದೇವ್ – ಎಸಿಪಿ  ಆಗ್ನೇಯ ಸಂಚಾರ ವಿಭಾಗ, ಬೆಂಗಳೂರು ಪರಮಾನಂದ್ – ಡಿವೈಎಸ್ಪಿ  ಡಿ.ಎ.ಆರ್ ರಾಯಚೂರು ಷಣ್ಮುಗವರ್ಮಾ – ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ, ಮೈಸೂರು ಭಾವುದ್ದೀನ್ ರುಕ್ಮುದ್ದೀನ್ – ಪೊಲೀಸ್ ಇನ್ಸ್‌ಪೆಕ್ಟರ್, ಮಾಳಮಾರುತಿ ಠಾಣೆ, ಬೆಳಗಾವಿ ಗುರುಪ್ರಸಾದ್ ಗೋಪಾಲ್ ನಾಯಕ್ – ಇನ್ಸ್‌ಪೆಕ್ಟರ್, ಸಿಐಡಿ  ನಯೀಂ – ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್

ರಾಜಭವನ ಶ್ರೀನಿವಾಸ – ಪಿ.ಎಸ್.ಐ ಕೆ.ಪಿ. ಅಗ್ರಹಾರ ಠಾಣೆ, ಬೆಂಗಳೂರು ಜ್ಞಾನದೇವ್ ನವಲ ತರಾಸೆ – ಎ.ಆರ್.ಎಸ್.ಐ , ಕೆ.ಎಸ್.ಆರ್.ಪಿ ಮಹದೇವಸ್ವಾಮಿ – ಹೆಡ್ ಕಾನ್ಸ್‌ಟೇಬಲ್, ವಿಧಾನಸೌಧ ಭದ್ರತೆ ಮಾರಿಯಾ ಜೋಸೆಫ್ ದಿನೇಶ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್, ಡಿ.ಸಿ.ಆರ್.ಇ , ಕೆಜಿಎಫ್ ಚಂದ್ರಶೇಖರ ಚಿಕ್ಕಣ್ಣನವರ್ – ಹೆಡ್ ಕಾನ್ಸ್‌ಟೇಬಲ್, ಕೆ.ಎಸ್.ಆರ್.ಪಿ ಅಬ್ದುಲ್ ಕಮಾಲ್ – ಹೆಡ್ ಕಾನ್ಸ್‌ಟೇಬಲ್, ತರೀಕೆರೆ ಠಾಣೆ ನಾಗೇಶ್ ಮಚ್ಚಯ್ಯ – ಹೆಡ್ ಕಾನ್ಸ್‌ಟೇಬಲ್, ಸಿಐಡಿ  ಮನೋಹರ್ – ಪೊಲೀಸ್ ಕಾನ್ಸ್‌ಟೇಬಲ್, ಹುಣಸೂರು ಠಾಣೆ

Leave a comment

Leave a Reply

Your email address will not be published. Required fields are marked *

Related Articles

ಪ್ರವಚನದ ನಡುವೆ ಸಚಿವಈಶ್ವರ ಖಂಡ್ರೆಗೆ ಜೈಕಾರ ಪ್ರವಚನ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಸ್ವಾಮೀಜಿ

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಮಹಾಸ್ವಾಮಿಗಳು ತೀವ್ರ ಮುಜುಗರ ಅನುಭವಿಸಿದರು....

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ...