ಆಂಜನೇಯ ದೇವಸ್ಥಾನ ಅಕ್ರಮ ಪ್ರವೇಶ ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಬಂಧನ

2

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದಲ್ಲಿ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಘಟನೆ ನಡೆದಿದ್ದು, ಇಲ್ಲಿನ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ದುಷ್ಕರ್ಮಿಯೋರ್ವ ಅಕ್ರಮ ಪ್ರವೇಶ ಮಾಡಿದ್ದೂ ಅಲ್ಲದೆ ದೇಗುಲದ ಆವರಣದಲ್ಲೇ ಮೂತ್ರವಿಸರ್ಜನೆ ಮಾಡಿದ್ದಾನೆ. ಆತನ ಕೃತ್ಯವನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದ್ದಾರೆ

. ಈ ವೇಳೆ ಆತ ತನ್ನ ದುಷ್ಕೃತ್ಯವನ್ನು ಒಪ್ಪಿಕೊಂಡಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ದೌಡೌಯಿಸಿದ ಪೊಲೀಸರು ಕುಕೃತ್ಯವೆಸಗಿದ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಂಧಿತನನ್ನು 31 ವರ್ಷದ ಮೊಹಮದ್ ಜಾಫರ್ ಎಂದು ಗುರುತಿಸಲಾಗಿದೆ ಎಂದು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜಾಫರ್‌ನನ್ನು ಬಂಧಿಸಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್ ಇನ್ನು ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಯಿತು. ದೇವಸ್ಥಾನದ ಬಳಿ ಮಲಗುತ್ತಿದ್ದ ಜಾಫರ್ ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ, ಜಾಫರ್ ಈ ಹಿಂದೆ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಆಗಾಗ್ಗೆ ಮಲಗುತ್ತಿದ್ದ ಎಂಬುದು ತಿಳಿದುಬಂದಿದೆ.
ಆದರೆ, ಇದುವರೆಗೆ ಯಾರೂ ಆತನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ದೇವಸ್ಥಾನದಲ್ಲಿ ಇಂತಹ ಕೃತ್ಯ ಎಸಗಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಪೊಲೀಸ್ ಇಲಾಖೆಯ 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರತಿಷ್ಠಿತ ಪ್ರಶಸ್ತಿ ‘ರಾಷ್ಟ್ರಪತಿ ಪದಕ-2026’

ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್...

ಪ್ರವಚನದ ನಡುವೆ ಸಚಿವಈಶ್ವರ ಖಂಡ್ರೆಗೆ ಜೈಕಾರ ಪ್ರವಚನ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಸ್ವಾಮೀಜಿ

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಮಹಾಸ್ವಾಮಿಗಳು ತೀವ್ರ ಮುಜುಗರ ಅನುಭವಿಸಿದರು....

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ...