ರೈತರಿಗೆ ನೀಡುತ್ತಿರುವ ಬೆಳೆ ಸಾಲ ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂ ಗೆ ಏರಿಕೆ

1
ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತ ಸದಸ್ಯರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲಮಿತಿಯನ್ನು 5 ಲಕ್ಷ ರೂ.ಗಳಿಗೆ ಏರಿಸಲಾಗಿದ್ದು, ಈ ಸಂಬಂಧ ಸರ್ಕಾರದಿಂದ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ರೈತರಿಗೆ ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಬೆಳೆ ಸಾಲ ಮಿತಿಯನ್ನು 2023-24ನೇ ಸಾಲಿನಲ್ಲಿಸರಕಾರ 3ರಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿತ್ತು. ಆದರೆ ನಬಾರ್ಡ್‌ ಇದಕ್ಕೆ ಬೇಕಾದ ಮೊತ್ತವನ್ನು ಬಿಡುಗಡೆಗೊಳಿಸದ ಕಾರಣ ಅನೇಕ ರೈತರು ಈ ಯೋಜನೆಯಿಂದ ವಂಚಿತರಾಗಿದ್ದರು.

ಈಗ ಸಾಲ ಮಿತಿ ಏರಿಕೆ ಕುರಿತು ಸಹಕಾರ ಇಲಾಖೆಯಿಂದ ಸುತ್ತೋಲೆ ಪ್ರಕಟವಾಗಿದ್ದು, 2026-27ನೇ ಸಾಲಿನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ 5 ಲಕ್ಷ ರೂ.ವರೆಗಿನ ಕೃಷಿ ಸಾಲ ಮತ್ತು 2 ಲಕ್ಷ ರೂ.ವರೆಗಿನ ಪಶು ಸಂಗೋಪನೆ ಮತ್ತು ಮೀನುಗಾರಿಕೆ ದುಡಿಯುವ ಬಂಡವಾಳ ಸಾಲ ಹಾಗೂ ಶೇ.3 ಬಡ್ಡಿ ದರದಲ್ಲಿ ನೀಡುವ 15 ಲಕ್ಷ ರೂ. ಮಧ್ಯಮಾವಧಿ ಸಾಲ ವಿತರಿಸುವಂತೆ ಸೂಚಿಸಲಾಗಿದೆ. ಇದುವರೆಗೆ ಶೇ.3 ಬಡ್ಡಿ ದರದ ಸಾಲದ ಮಿತಿ ಗರಿಷ್ಠ 10 ಲಕ್ಷ ರೂ. ಆಗಿತ್ತು. ಕನಿಷ್ಠ ಶೇ.10ರಷ್ಟು ಹೊಸ ಸದಸ್ಯರಿಗೆ, ಶೇ.24.10ರಷ್ಟು ಪ.ಜಾತಿ, ಪಂಗಡದ ಸದಸ್ಯರಿಗೆ ಸಾಲ ವಿತರಿಸಲು ನಿರ್ದೇಶನ ನೀಡಲಾಗಿದೆ.CM ಸಂದೇಶ ಪ್ರಿಯ ರೈತರೇ, “ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ 5 ಲಕ್ಷ ರೂ.ವರೆಗೆ ಪಡೆದ ಬೆಳೆ ಸಾಲವನ್ನು ಗರಿಷ್ಠ ಒಂದು ವರ್ಷದೊಳಗೆ ಬಡ್ಡಿರಹಿತವಾಗಿ ಮರುಪಾವತಿಸಿದಲ್ಲಿ ಸರಕಾರದಿಂದ ಪ್ರತಿವರ್ಷ ಬಡ್ಡಿ ಸಹಾಯಧನ ಪಾವತಿಸಲಾಗುತ್ತದೆ.ಮಂಜೂರಾದ ಸಾಲದ ಹಣ ಡಿಸಿಸಿ ಬ್ಯಾಂಕ್‌ನಲ್ಲಿರುವ ಉಳಿತಾಯ ಖಾತೆಗೆ ಜಮಾ ಆಗಿರುವುದನ್ನು ಖಚಿತಪಡಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿಕೊಳ್ಳುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಸಂದೇಶ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಶಾಸಕಾಂಗ ಪಕ್ಷದ ಸಭೆಗೆ ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರ ಗೈರು

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲ ಕಾಂಗ್ರೆಸ್...

20 ವರ್ಷದಿಂದ ಸಂತ್ರಸ್ತ ರೈತರಿಗೆ ಭೂ ಒತ್ತುವರಿ ಪರಿಹಾರ ಬಾಕಿ ಗದಗ ಜಿಲ್ಲಾಧಿಕಾರಿ ಸರಕಾರಿ ಕಾರು ಕಚೇರಿ ಸೊತ್ತು ಜಪ್ತಿ

“ಗದಗ:  ಸರಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದಿದ್ದರೆ, ಏನು ಮಾಡುತ್ತಾರೆ? ಎಂದುಕೊಂಡರು ಅನಿಸುತ್ತೆ ಗದಗ ಜಿಲ್ಲಾಧಿಕಾರಿಗಳು!...

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಯುವತಿಯರ ಅಶ್ಲೀಲ ಫೋಟೂ ಕಟಿಂಗ್ ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ...

ರೇಣುಕಾಸ್ವಾಮಿ ಪ್ರಕರಣ ನಟ ದರ್ಶನ್ ಗೆ ಸಂಕಸ್ಟ ಆರೋಪಿ ಪ್ರದೋಷನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಕೋರ್ಟ್ ಅನುಮತಿ

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ...