
ಉಡುಪಿ :: ವಿಶ್ವಾಸ್ ವಿ ಅಮೀನ್ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿದ ಕೆಪಿಸಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ವಿಭಾಗದ ನೂತನ ಜಿಲ್ಲಾಧ್ಯಕ್ಷರ ನೇಮಕಾತಿ ಆದೇಶಕ್ಕೆ ತಡೆದೆ : ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರ ವಿಭಾಗದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದ ಮನೋಜ್ ಎಸ್ ಕರ್ಕೆರ ಅವರ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ.



ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು, ಮಾಜಿ ವಿಧಾನ ಪರಿಷತ್ ಸದಸ್ಯ ಎಂ ನಾರಾಯಣಸ್ವಾಮಿ ನೂತನ ಅಧ್ಯಕ್ಷರ ನೇಮಕಾತಿ ಆದೇಶವನ್ನು ತಡೆಹಿಡಿದಿದ್ದು, ಮುಂದಿನ ಆದೇಶದವರೆಗೆ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಅಮೀನ್ ಅವರೇ ಉಡುಪಿ ಜಿಲ್ಲಾ ಮೀನುಗಾರ ಘಟಕದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಲು ತಿಳಿಸಿದ್ದಾರೆ.





Leave a comment