ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ, ಅಂಬಾಗಿಲು ವಲಯ ಹಾಗೂ ನಿಟ್ಟೂರು ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಹಾಗೂ ಪೋಷಕರಿಗಾಗಿ ‘ಪಾಲಕ’ ಜಾಗೃತಿ ಕಾರ್ಯಕ್ರಮವನ್ನು ನಿಟ್ಟೂರು ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.




ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ನಗರಸಭಾ ಸದಸ್ಯ ಶ್ರೀ ಕೆ. ವಿಜಯ ಕೊಡವೂರು ಅವರು, “ವಿದ್ಯಾರ್ಥಿಗಳು ಈ ದೇಶದ ನಿಜವಾದ ಆಸ್ತಿ ಹಾಗೂ ಭವಿಷ್ಯದ ರೂವಾರಿಗಳು. ಯುವಜನತೆ ಮತ್ತು ವಿದ್ಯಾರ್ಥಿಗಳು ಯಾವುದೇ ದುರಭ್ಯಾಸ ಅಥವಾ ವ್ಯಸನಗಳಿಗೆ ಬಲಿಯಾಗದೆ ಸನ್ಮಾರ್ಗದಲ್ಲಿ ಸಾಗಬೇಕು. ನಮ್ಮ ದೇಶದಿಂದ ವ್ಯಸನಗಳನ್ನು ಸಂಪೂರ್ಣವಾಗಿ ದೂರವಿಟ್ಟು ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜಾಗೃತಿ ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ಶ್ರಮಿಸುತ್ತಿದೆ,” ಎಂದು ಹೇಳಿದರು.



ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಾಗೂ ಪ್ರಮುಖರಾಗಿ ಶ್ರೀ ದಿನೇಶ್ ಆಚಾರ್ಯ, ನಿಟ್ಟೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ರಾಮದಾಸ, ಅಂಬಾಗಿಲು ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ರಾಧಾ ಉಪಸ್ಥಿತರಿದ್ದರು.ಯೋಜನೆ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ, ಅಂಬಾಗಿಲು ವಲಯ ಹಾಗೂ ನಿಟ್ಟೂರು ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಹಾಗೂ ಪೋಷಕರಿಗಾಗಿ ‘ಪಾಲಕ’ ಜಾಗೃತಿ ಕಾರ್ಯಕ್ರಮವನ್ನು ನಿಟ್ಟೂರು ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.

.
Leave a comment