ನಿಟ್ಟೂರು: ಆ. 27: ಶ್ರೀ ಧೂಮಾವತಿ ಯುವಕ ಮಂಡಲ (ರಿ.) ವಿಷ್ಣುಮೂರ್ತಿ ನಗರ, ನಿಟ್ಟೂರು, ಹಾಗೂ ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ.), ವಾದಿರಾಜ ಕಾಂಪ್ಲೆಕ್ಸ್, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.


ಆಗಸ್ಟ್ 30ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಟ್ಟೂರಿನ ಶ್ರೀ ಸೋಮನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ನಿಟ್ಟೂರು ಇಲ್ಲಿಯ ಶ್ರೀಮತಿ ಯಶೋಧ ಗುಂಡುರಾಜ ಸಭಾಭವನದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಣಿಪಾಲ, ಇವರ ದಂತ ವೈದಕೀಯ ಕಾಲೇಜಿನ ತಜ್ಞ ವೈದ್ಯರ ತಂಡದಿಂದ ಸಾರ್ವಜನಿಕರಿಗೆ ಉಚಿತ ದಂತ ತಪಾಸಣೆ ಹಾಗೂ ಅಗತ್ಯ ಚಿಕಿತ್ಸಾ ಸಲಹೆಗಳನ್ನು ನೀಡಲಾಗುವುದು.


ಶಿಬಿರದಲ್ಲಿ ಹಲ್ಲುಗಳ ಸಂಪೂರ್ಣ ತಪಾಸಣೆ, ದಂತ ಸಮಸ್ಯೆಗಳ ಕುರಿತು ವೈದ್ಯಕೀಯ ಸಲಹೆ ಹಾಗೂ ಸೂಕ್ತ ಚಿಕಿತ್ಸಾ ಮಾರ್ಗದರ್ಶನ ದೊರೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಉಚಿತ ವೈದ್ಯಕೀಯ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.


ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಯೋಜಿಸಿರುವ ಈ ಶಿಬಿರವನ್ನು ಯಶಸ್ವಿಗೊಳಿಸಲು ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
Leave a comment