ಆಪರೇಷನ್ ಸಿಂಧೂರ್’ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ರಾಮ ಮಂದಿರ ಟ್ರಸ್ಟ್‌ಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಯ್ಕೆ

2
ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಮತ್ತು ಉನ್ನತ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿಗಳು ಬಂದಿದ್ದು, ಈ ಪೈಕಿ ಕೇವಲ 20 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನ ಸುತ್ತಿಗೆ ಆಯ್ಕೆ ಮಾಡಲಾಗಿದೆ.


ಸಂದರ್ಶನದ ನಂತರ ರಾಮ ಮಂದಿರ ಟ್ರಸ್ಟ್‌ಗೆ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತೀಯ ವಾಯುಪಡೆಯಲ್ಲಿ ಹಲವಾರು ಕಮಾಂಡಿಂಗ್ ಹುದ್ದೆಗಳನ್ನು ಹೊಂದಿದ್ದ ಮಿಶ್ರಾ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಪಶ್ಚಿಮ ಕಮಾಂಡ್‌ನ ಮುಖ್ಯಸ್ಥರಾಗಿದ್ದರು. ಯಾರು ಈ ಜೀತೇಂದ್ರ ಮಿಶ್ರಾ? ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ಅವರು ಭಾರತೀಯ ವಾಯುಪಡೆಯ ನಿವೃತ್ತ ಹಿರಿಯ ಅಧಿಕಾರಿಯಾಗಿದ್ದು, ವಾಯುಪಡೆಯ ಪಶ್ಚಿಮ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದಾರೆ.
ಸುಮಾರು 38 ವರ್ಷಗಳಿಗೂ ಅಧಿಕ ಅವಧಿಯ ವೃತ್ತಿ ಜೀವನದಲ್ಲಿ ಇವರು ವಾಯುಪಡೆಯಲ್ಲಿ ಹಲವು ಪ್ರಮುಖ ಆಡಳಿತ ಮತ್ತು ಕಮಾಂಡ್ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇವುಗಳಲ್ಲಿ ಫೈಟರ್ ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್, ಏರ್‌ಕ್ರಾಫ್ಟ್ & ಸಿಸ್ಟಮ್ಸ್ ಟೆಸ್ಟಿಂಗ್ ಎಸ್ಟಾಬ್ಲಿಷ್ಮೆಂಟ್‌ನ ಮುಖ್ಯ ಪರೀಕ್ಷಾ ಪೈಲಟ್
ಎರಡು ವಾಯುನೆಲೆಗಳ ಏರ್ ಆಫೀಸರ್ ಕಮಾಂಡಿಂಗ್, ವಾಯುನೆಲೆ ಕಚೇರಿಯ ನಿರ್ದೇಶಕ, ಪ್ರಿನ್ಸಿಪಾಲ್ ಡೈರೆಕ್ಟರ್ ಹಾಗೂ ಸಹಾಯಕ ವಾಯುಪಡೆ ಮುಖ್ಯಸ್ಥ (ಯೋಜನೆಗಳು), ಕಮಾಂಡೆಂಟ್ ಮತ್ತು ಇಂಟಿಗ್ರೇಟೆಡ್‌ ಡಿಫೆನ್ಸ್‌ ಸ್ಟಾಫ್‌ ಉಪಮುಖ್ಯಸ್ಥ ಮುಂತಾದ ಜವಾಬ್ದಾರಿಗಳನ್ನು ನಿರ್ವಹಸಿದ್ದಾರೆ.
ಈ ಪ್ರಸ್ತುತ ಹುದ್ದೆಯನ್ನು ವಹಿಸಿಕೊಳ್ಳುವುದಕ್ಕೂ ಮುನ್ನ ಅವರು ಸಂಯೋಜಿತ ರಕ್ಷಣಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಈ ಹಿರಿಯ ವಾಯುಪಡೆ ಅಧಿಕಾರಿಯು ‘ಅತಿ ವಿಶಿಷ್ಟ ಸೇವಾ ಪದಕ’ ಮತ್ತು ‘ವಿಶಿಷ್ಟ ಸೇವಾ ಪದಕ’ಗಳ ಗೌರವಕ್ಕೆ ಭಾಜನರಾಗಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಎಸ್ ಐಆರ್ ಮತದಾರ ಪಟ್ಟಿ ಪರಿಷ್ಕರಣೆ ಮೂರು ರಾಷ್ಟ್ರಗಳಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಯಭಾರಿ ಹೆಸರು ನಾಪತ್ತೆ

ನವದೆಹಲಿ: ಯುಎಇ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇಶದ ಮಾಜಿ ರಾಯಭಾರಿಯೊಬ್ಬರು...

ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಲಡಾಖ್‌ನ ಜನರಿಗಾಗಿ ಕೇಂದ್ರ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಲಡಾಖ್‌ನಲ್ಲಿ ಜಮ್ಮು...

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...