
ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಬೆಂಗಳೂರಿನ ಜಾಲಹಳ್ಳಿಯ ಎಚ್ ಎಮ್ ಟಿ ಲೇಔಟ್ನಲ್ಲಿರೋ ಇಡಿ ಕಚೇರಿಗೆ ಆಗಮಿಸಿ ವಿಚಾರಣೆಗಾಗಿ ಹಾಜರಾಗಿದ್ದಾರೆ. ಚಾರ್ಜ್ ಶಿಟ್ ಬಳಿಕ ಮತ್ತಷ್ಟು ಮಾಹಿತಿ ಪಡೆಯಲು ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರಗೆ ಅವರಿ ಇಡಿ ಸಮನ್ಸ್ ನೀಡಿತ್ತು ಎನ್ನಲಾಗಿದೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನಾಗೇಂದ್ರ ಅವರು ಈಗಾಗಲೇ ಮೂರು ತಿಂಗಳು ಜೈಲುವಾಸ ಅನುಭವಿಸಿದ್ದು, ಬಳಿಕ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದರು. ಪ್ರಕರಣ ಸಂಬಂದ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಸಿಬಿಐ ಸಹ ಚಾರ್ಜ್‌ಶೀಟ್ ಸಲ್ಲಿಸಿದೆ. ಅಲ್ಲದೆ ಜಾರಿ ನಿರ್ದೇಶನಾಲಯ(ED) ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.


Leave a comment