ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

0

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ ಪೇಪರ್ ಮೇಲೆ ‘ಬಾಂಬ್’ ಎಂದು ಬರೆದಿರುವುದನ್ನು ವಿಮಾನ ಸಿಬ್ಬಂದಿಯೊಬ್ಬರು ಗಮನಿಸಿದ್ದರು. ತಕ್ಷಣವೇ ಜಾಗರೂಕರಾದ ಪೈಲಟ್ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ಅನುಮತಿ ಪಡೆದರು.
107 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತಿದ್ದ ‘ 6E 97’ ವಿಮಾನವು ಸಂಜೆ 4.17ಕ್ಕೆ ಲಕ್ನೋದಿಂದ ಹೊರಟು, ಸಂಜೆ 5.43ಕ್ಕೆ ಅಹಮದಾಬಾದ್‌ನಲ್ಲಿ ಸುರಕ್ಷಿತವಾಗಿ ಇಳಿಯಿತು. ಭದ್ರತಾ ಸಿಬ್ಬಂದಿ ತಕ್ಷಣವೇ ವಿಮಾನದಲ್ಲಿದ್ದ ಎಲ್ಲರನ್ನೂ ಹೊರಗೆ ಕರೆತಂದು ಟರ್ಮಿನಲ್ 2ಕ್ಕೆ ಸ್ಥಳಾಂತರಿಸಿದ್ದಾರೆ. ವಿಮಾನದಲ್ಲಿ ಕೂಲಂಕಷ ತಪಾಸಣೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಿಲ್ಲ.
ಟಿಶ್ಯೂ ಪೇಪರ್‌ನಲ್ಲಿ `ಬಾಂಬ್’ ಎಂಬ ಪದ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನದಲ್ಲಿ ಭದ್ರತಾ ಆತಂಕ ಸೃಷ್ಟಿಯಾಗಿತ್ತು. ಘಟನೆಯ ನಿಖರ ಕಾರಣ ಹಾಗೂ ಸಂದೇಶವನ್ನು ಬರೆದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಕುರಿತು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಹಲವು ಏಜೆನ್ಸಿಗಳು ತನಿಖೆ ನಡೆಸುತ್ತಿವೆ. ತನಿಖೆಯ ಭಾಗವಾಗಿ ವಿಮಾನದಲ್ಲಿದ್ದ ಪ್ರಯಾಣಿಕರಿಂದ ಹಸ್ತಾಕ್ಷರ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರಯಾಣಿಕರಿಗೆ ಟಿಶ್ಯೂ ಪೇಪರ್‌ನಲ್ಲಿ ಬರೆಯಲು ಸೂಚಿಸಲಾಗಿದ್ದು, ಅವರ ಬರವಣಿಗೆಯನ್ನು `ಬಾಂಬ್’ ಸಂದೇಶವಿದ್ದ ಟಿಶ್ಯೂ ಪೇಪರ್‌ನ ಬರವಣಿಗೆಯೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಕಳೆದ 10 ದಿನಗಳಲ್ಲಿ ವಿಮಾನವೊಂದು ತುರ್ತು ಲ್ಯಾಂಡಿಂಗ್ ಮಾಡಿರುವುದು ಇದು ಎರಡನೇ ಪ್ರಕರಣವಾಗಿದೆ. ಇದಕ್ಕೂ ಮೊದಲು ಏರ್ ಇಂಡಿಯಾ ವಿಮಾನವೊಂದು ಅಹಮದಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಆ ಪ್ರಕರಣದ ತನಿಖೆಯಲ್ಲಿ ವಿಮಾನದ ಸಿಬ್ಬಂದಿಯೊಬ್ಬರ ಹೆಸರು ಕೂಡ ಮುನ್ನೆಲೆಗೆ ಬಂದಿತ್ತು

Leave a comment

Leave a Reply

Your email address will not be published. Required fields are marked *

Related Articles

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...

ಆಪರೇಷನ್ ಸಿಂಧೂರ್’ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ರಾಮ ಮಂದಿರ ಟ್ರಸ್ಟ್‌ಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಯ್ಕೆ

ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ...

ಎಸ್ ಐಆರ್ ಮತದಾರ ಪಟ್ಟಿ ಪರಿಷ್ಕರಣೆ ಮೂರು ರಾಷ್ಟ್ರಗಳಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಯಭಾರಿ ಹೆಸರು ನಾಪತ್ತೆ

ನವದೆಹಲಿ: ಯುಎಇ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇಶದ ಮಾಜಿ ರಾಯಭಾರಿಯೊಬ್ಬರು...