ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ನೋಟಿಸ್ ಜಾರಿ

2
ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಶುಕ್ರವಾರ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.

ಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಈ ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿರಂತರ ಫೋನ್ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಂದು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟಿಸ್ ನೀಡಿರುವ ಪೊಲೀಸರು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪೊಲೀಸರ ಈ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಹಿಂದೆ ವ್ಯವಸ್ಥಿತ ಸಂಚು ಎಂದು ಆರೋಪಿಸಿವ ವಿಎಚ್ ಪಿ ಕೆಂಡಾಮಂಡಲ ಅಬ್ದುಲ್ ರೆಹಮಾನ್ ಹತ್ಯೆಗೂ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಏನು ಸಂಬಂಧ? ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಹಿಂದೂ ಸಂಘಟನೆಯನ್ನು ಟಾರ್ಗೆಟ್ ಮಾಡುತ್ತಿದೆ ಎಂದು ವಿಹೆಚ್ಪಿ ಮುಖಂಡ ಶರಣ್ ಪಂಪ್ ವೆಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಚಾರಣೆ ನೆಪದಲ್ಲಿ ಪ್ರಭಾಕರ ಭಟ್ ಅವರನ್ನ ಬಂಧಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ ಪಂಪ್ ವೆಲ್, ಎರಡು ಚಾರ್ಜ್ಶೀಟ್ ಆದ ಪ್ರಕರಣದಲ್ಲಿ ವಿಚಾರಣೆ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ. ಬಿ‌.ಸಿ.ರೋಡ್ ಚಲೋ ಹಮ್ಮಿಕೊಂಡ ಬೆನ್ನಲ್ಲೇ ಈ ನೋಟಿಸ್ ನೀಡಲಾಗಿದೆ. ಇದು ಹಿಂದೂಗಳ ಧ್ವನಿಯನ್ನು ಅಡಗಿಸುವಂತಹ ಪ್ರಯತ್ನ. ಕಲ್ಲಡ್ಕ ಪ್ರಭಾಕರ ಭಟ್ಗೆ ಕೊಟ್ಟ ನೋಟಿಸ್ ಹಿಂಪಡೆಯಿರಿ. ಇಲ್ಲದಿದ್ರೆ ಹಿಂದೂ ಕಾರ್ಯಕರ್ತರು ಬೀದಿಗಿಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನವರಾತ್ರಿ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ  ಪಿಲಿ ಪಂಥ ಸೀಸನ್ 1 ಹುಲಿ ವೇಷ ಕುಣಿತ ಸ್ಪರ್ಧೆ ಆಯೋಜನೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ. ಉಡುಪಿ ಉಚ್ಚಲ ದಸರಾ ಸಮಿತಿ. ಉಡುಪಿ ಉಚ್ಚಿಲ...

ಲಕ್ಷ್ಮೀನಗರದಲ್ಲಿ ಗೋಸೇವಾ ಕಾರ್ಯ ಶ್ರಮದಾನ ಮೂಲಕ ಹುಲ್ಲು ಕಟಾವು; ನಂದ ಗೋಕುಲ ಗೋಶಾಲೆಗೆ 150 ಕೆ.ಜಿ. ಗೋ ಗ್ರಾಸ  ಸಮರ್ಪಣೆ

ಉಡುಪಿ:ಗೆಳೆಯರ ಬಳಗ (ರಿ.), ಗರ್ಡೇ–ಲಕ್ಷ್ಮೀನಗರ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ಕೊಡವೂರು ಹಾಗೂ ಶೌರ್ಯ ವಿಪತ್ತು...

ಕರಾವಳಿ ಮಂಗಳೂರಿನಿಂದ ಕಾರವಾರದವರೆಗೆ ವ್ಯಾಪಿಸಿದ ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ;

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳನ್ನು ದೇಶದ ಪ್ರಮುಖ ಪ್ರವಾಸೋದ್ಯಮ ಹೂಡಿಕೆ ವಲಯಗಳಾಗಿ ರೂಪಿಸುವ...

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸದಸ್ಯರಿಗೆ ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ...