69ನೇ ಕನ್ನಡ ರಾಜ್ಯೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

40

“69ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

69ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ; ಎಲ್ಲೆಡೆ ಹರಡಿದ ಕನ್ನಡದ ಕಂಪು, ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವ ಜನತೆ ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...