ಐಟಿ ಅಧಿಕಾರಿಗಳ ದಾಳಿ ಹೆಸರಿನಲ್ಲಿ ಬೆದರಿಸಿ 7.50 ಲಕ್ಷ ನಗದು ಚಿನ್ನಾಭರಣ ಪಡೆದು ಪರಾರಿ ಪ್ರಕರಣ ದಾಖಲು

2

: ಶ್ರೀಮತಿ ಜ್ಯೂಲಿಯಟ್‌ ಪೆರಂಪಳ್ಳಿ ರಸ್ತೆ, ಶಿವಳ್ಳಿ ಗ್ರಾಮ ಇವರು ಸುಮಾರು 04 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಎಂಬವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದು ಸುನೀತಾ ರವರಲ್ಲಿ ಅವರ ಹಾಗೂ ಅವರ ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿರುತ್ತಾರೆ.

ಸುನೀತಾ ರವರು ಜೂಲಿಯಟ್ ರಲ್ಲಿ ಅವರ ಗಂಡನಿಗೆ ವಿಚ್ಚೇದನ ಕೊಡುವಂತೆ ಹೇಳುತ್ತಿದ್ದು,ಇದರಿಂದ ಬೇಸರಗೊಂಡು ಮನೆ ಬಿಟ್ಟು ಹೋಗಲು ನಿರ್ಧರಿಸಿ ಅವರ ತಮ್ಮ ತಾಯಿಯನ್ನು ಮನೆಗೆ ಬರಲು ಹೇಳಿ ದಿನಾಂಕ: 28/10/2024 ರಂದು ಅವರ ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನವನ್ನು ಹಾಗೂ ಗಂಡನ ಮನೆಯ ಲಾಕರ್‌ ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ಹಣವನ್ನು ಕೊಟ್ಟು ಕಳುಹಿಸಿದ್ದು .

ನಂತರ ದಿನಾಂಕ: 29/10/2024 ರಂದು ಬೆಳಿಗ್ಗೆ 10:30 ಗಂಟೆಗೆ ಸುನೀತಾ ರವರು ಸ್ಟ್ಯಾನಿ ಎಂಬವರೊಂದಿಗೆ ಶ್ರೀಮತಿ ಜೂಲಿಯಟ್ ರವರ ಮನೆಗೆ ಬಂದು ಐ,ಟಿ ಅಧಿಕಾರಿಗಳು ಬಂದಿದ್ದಾರೆ ನಿಮ್ಮ ಮನೆಗೆ ರೈಡ್‌ ಮಾಡುತ್ತಾರೆ ಲಾಕರ್‌ ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆಯಬೇಕು ಎಂದು ಹೇಳಿ ಜೂಲಿಯಟ್ ರಿಂದ ಲಾಕರ್‌ ಕೀ ತೆಗೆದುಕೊಂಡು ಲಾಕರ್‌ ಓಪನ್‌ ಮಾಡಿ ಅದರಲ್ಲಿ ಇದ್ದ ಹಣದಲ್ಲಿ ಒಂದು ಲಕ್ಷ 50 ಸಾವಿರ ರೂಪಾಯಿಯನ್ನು ಜೂಲಿಯೆಟ್ ರಿಗೆ ನೀಡಿರುತ್ತಾರೆ

ಉಳಿದ 7 ಲಕ್ಷ 50 ಸಾವಿರ ರೂಪಾಯಿ ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ನೆಕ್ಲೆಸ್‌ ನ್ನು ಅವಳ ಚೀಲದಲ್ಲಿ ಹಾಕಿಕೊಂಡು ನನ್ನಲ್ಲಿ ಇರಲಿ ಆ ನಂತರ ಕೊಡುತ್ತೇನೆ

ಎಂದು ಹೇಳಿದ್ದು, ಸುನೀತಾ ಹಾಗೂ ಸ್ಟಾನಿ ಇವರುಗಳು ಐ,ಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ 7 ಲಕ್ಷ 50 ಸಾವಿರ ರೂಪಾಯಿ ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್‌ ಸರವನ್ನು ತೆಗೆದುಕೊಂಡು ಮೋಸಮಾಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಠಾಣಾ ಯಲ್ಲಿ ಕಲಂ: 316(7) 318(4) R/w 3(5) ಬಿಎನ್ಎಸ್‌ ರಂತೆ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...