ಹೃದಯವಂತರಿಗೆ ಮಾತ್ರ ಕಣ್ಣೀರು ಬರುವುದು ಕಟುಕರಿಗೆ ಇದ್ಯಾವುದೂ ಇಲ್ಲ:: ಕೇಂದ್ರ ಸಚಿವ ಕುಮಾರಸ್ವಾಮಿ

3

“ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ‌.ಕುಮಾರಸ್ವಾಮಿ, ‘ಕಟುಕರಿಗೆ ಕಣ್ಣೀರು ಬರುವುದಿಲ್ಲ’ ಎಂದು ಹೇಳಿದರು. ರಾಜಕಾರಣದಲ್ಲಿ ಕೆಲವರು ಕಟುಕರಿದ್ದಾರೆ. ಅವರಿಗೆ ಕಣ್ಣೀರು ಬರುವುದಿಲ್ಲ. ಭಯ-ಭಕ್ತಿ ಇಲ್ಲದ ಅವರಿಗೆ ಕಣ್ಣೀರು ಬಾರದು. ನಮಗೆ ಜನರ ಕಷ್ಟ ನೋಡಿದರೆ ಕಣ್ಣೀರು ಬರುತ್ತದೆ ಎಂದರು.

ನಾನೂ ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಅದನ್ನು ಮಾಡಿರುವುದು ಅನುಕಂಪ‌ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ, ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ ಎಂದರು.
ಪ್ರಧಾನಿ ಮೋದಿ ಬಗ್ಗೆ ರಾಜಕೀಯ ಪುಡಾರಿ ಎಂಬ ಸಿಎಂ ಟೀಕೆ ವಿಚಾರಕ್ಕೆ ಉತ್ತರಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಯಾವ ರೀತಿ ಮಾತನಾಡುತ್ತಿದ್ದಾರೆ? ಅವರನ್ನ ಪುಡಾರಿ ಅನ್ನೋದಾದ್ರೆ ಇವರು ಅದೇ ರೀತಿ ಅಲ್ಲವೇ ಮಾತನಾಡುತ್ತಿರೋದು ಎಂದು ಕುಟುಕಿದರು.

Leave a comment

Leave a Reply

Your email address will not be published. Required fields are marked *

Related Articles

ರಾಹುಲ್ ಗಾಂಧಿ ಭಾಗಹಿಸುವ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ಫ್ರೀಡಂ ಪಾರ್ಕ್‌ನಲ್ಲಿ  ಕಾಂಪೌಂಡ್ ಗೋಡೆ ಕೆಡವಿ, ಮರ ಕಡಿಯಲಾಗಿದೆ ಎಂದು ದೂರು ನೀಡಿದ ಬಿಜೆಪಿ

“ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿರುವ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ಫ್ರೀಡಂ ಪಾರ್ಕ್‌ನಲ್ಲಿ...

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...