thekarnatakatoday.com
State

ವಕ್ಫ್‌ ಆಸ್ತಿ ವಿಚಾರ ರೈತರಿಗೆ ನೀಡಿದ ನೋಟಿಸ್ ಹಿಂಪಡೆದು ಪಹಣಿ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ

” ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು.

ಈ ವೇಳೆ ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದು ಈ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಿದ್ದರಾಮಯ್ಯ ವಿನಂತಿ ಮಾಡಿದ್ದು ಅವರ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಜನತೆಗೆ ಮನವಿ ಮಾಡಿದರು.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದರು.

ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಖಡಕ್ ಸೂಚನೆ ನೀಡಿದರು.

Related posts

ಕಲಬುರಗಿ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ವಿರುದ್ಧ ಷಡ್ಯಂತ್ರ ವಿರೋಧಿಸಿ ನಾಳೆ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ

The Karnataka Today

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್

The Karnataka Today

ಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ::ಡಿ ಸಿ ಎಮ್ ::ಡಿ ಕೆ ಶಿವಕುಮಾರ್

The Karnataka Today

Leave a Comment