ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಆಡಳಿತ ಅವಧಿಯಲ್ಲಿ ರೈತರಿಗೆ ಯಾವುದೇ ನೋಟೀಸ್ ನೀಡಲಾಗಿಲ್ಲ:: ಬಸವರಾಜ ಬೊಮ್ಮಾಯಿ

59

” ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ. ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಳೆಯ ವಿಡಿಯೋ ಬಿಡುಗಡೆ ಮಾಡಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೊ ಹರಿಬಿಟ್ಟು ಜಮೀರ್ ಅಪಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು

ನಾನು ಯಾವುದೇ ವಕ್ಪ್ ಬೋರ್ಡ್ ಸಭೆ ಮಾಡಿಲ್ಲ. ವಕ್ಪ್ ಬೋರ್ಡ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅನ್ವರ್ ಮಾನಿಪ್ಪಾಡಿ ವರದಿಯಲ್ಲಿರುವಂತೆ ವಕ್ಪ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಪ್ ಆಸ್ತಿ ವಶಪಡಿಸಿಕೊಳ್ಳಬೇಕೆಂದು ಹೇಳಿರುವುದನ್ನು ತಿರುಚಿದ್ದಾರೆ. ಆ ಸಂದರ್ಭದಲ್ಲಿ ರೈತರ ಜಮೀನಿಗೆ ನೊಟೀಸ್ ಕೊಡುವುದಾಗಲಿ, ಪಹಣಿ ತಿದ್ದುಪಡಿ ಮಾಡುವುದಾಗಲಿ ಯಾವೂದೂ ವಿಷಯ ನಮ್ಮ ಮುಂದೆ ಪ್ರಸ್ತಾಪವಾಗಿರಲಿಲ್ಲ.

ನಾನು ಅಂದು ಹೇಳಿರುವುದು ಅನ್ವರ್ ಮಾನಿಪ್ಪಾಡಿ ಅವರ ಸಮಿತಿ ವರದಿ ನೀಡಿರುವಂತೆ ಕಾಂಗ್ರೆಸ್ ನ್ ಕೆಲವು ದೊಡ್ಡ ನಾಯಕರು ಮೋಸದಿಂದ ಎಷ್ಡೆಷ್ಟು ವಕ್ಪ್ ಆಸ್ತಿ ನುಂಗಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು. ನಾವು ರೈತರಿಗೆ ಯಾವುದೇ ನೊಟಿಸ್ ಕೊಟ್ಟಿಲ್ಲ ರೈತರ ಜಮೀನು ವಶ ಪಡೆದುಕೊಂಡಿಲ್ಲ.

ಸಚಿವ ಜಮೀರ್ ಅವರು ರೈತರಿಗೆ ನೋಟಿಸ್ ಕೊಡುವ ಮೊದಲು ಕಾಂಗ್ರೆಸ್ ನಾಯಕರು ಎಲ್ಲೆಲ್ಲಿ ವಕ್ಪ್ ಆಸ್ತಿ ಹಡಪ್ ಮಾಡಿದ್ದಾರೆ‌ ಅದನ್ನು ಕೂಡಲೇ ರಿಕವರಿ ಮಾಡಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರ.

ನೋಟಿಸ್ ವಾಪಸ್ ಪಡೆದು ಚುನಾವಣೆ ಮುಗಿದ ನಂತರ ಮತ್ತೆ ನೋಟೀಸ್ ಕೊಡುವುದಿಲ್ಲ ಅನ್ನುವುದು ಏನು ಗ್ಯಾರೆಂಟಿ. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ನಿಜವಾಗಲೂ ಕಾಳಜಿ, ಗೌರವ ಇದ್ದರೆ, ರೈತರ ಆಸ್ತಿ ಉಳಿಸಬೇಕೆಂಬ ಮನಸ್ಸಿದ್ದರೆ ಕೂಡಲೆ ವಕ್ಪ್ ಗೆಜೆಟ್ ನೊಟಿಫಿಕೇಶನ್ ರದ್ದು ಮಾಡಬೇಕೆಂದು ಆಗ್ರಹಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...