ಕೆನಡಾ ಹಿಂದೂದೇವಾಲಯಗಳ ಮೇಲೆ ದಾಳಿ ಭಾರತೀಯ ರಾಯಭಾರಿಗಳನ್ನ ಬೆದರಿಸುವ ತಂತ್ರ:: ಪ್ರಧಾನಿ ನರೇಂದ್ರ ಮೋದಿ

75

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಖಂಡಿಸಿದ್ದಾರೆ, ಇದನ್ನು ಉದ್ದೇಶಪೂರ್ವಕ ಕೃತ್ಯ ಎಂದು ಕರೆದಿದ್ದು, ಭಾರತೀಯ ರಾಯಭಾರಿಗಳನ್ನು ಬೆದರಿಸುವ ಪ್ರಯತ್ನ ಎಂದು ಟೀಕಿಸಿದ್ದಾರೆ.


ದಾಳಿ ಘಟನೆ ಬೆನ್ನಲ್ಲೇ, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ರಾಯಭಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಅಷ್ಟೇ ಭಯಾನಕವಾಗಿದೆ.

ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರ ನ್ಯಾಯವನ್ನು ಖಾತ್ರಿಪಡಿಸಿ, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂಬ ನಿರೀಕ್ಷೆಯಿದೆ ಎಂದಿದ್ದಾರೆ.


ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಮಹಾಸಭಾ ದೇವಾಲಯದಲ್ಲಿ ಖಲಿಸ್ತಾನಿ ಬೆಂಬಲಿಗರು ಭಕ್ತಾದಿಗಳ ಮೇಲೆ ಹಲ್ಲೆ ನಡೆಸುವ ಮತ್ತು ದೇವಾಲಯದ ಆವರಣಕ್ಕೆ ನುಗ್ಗಿರುವ ವಿಡಿಯೋ ವೈರಲ್ ಆದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಕೆನಡಾದಲ್ಲಿ ಖಾಲಿಸ್ತಾನಿ ಪರ ಬೆಂಬಲಿಗರಿಂದ ಭಾರತೀಯರ ವಿರುದ್ಧ ನಡೆಸುತ್ತಿರುವ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಅವರ ಮೊದಲ ಅಧಿಕೃತ ಹೇಳಿಕೆ ಇದಾಗಿದೆ.

ಇದಕ್ಕೂ ಮುನ್ನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡಾ ಖಲಿಸ್ತಾನಿಗಳು ನಡೆಸಿದ ದಾಳಿ ಘಟನೆಯನ್ವು ಖಂಡಿಸಿತ್ತು. ಕೆನಡಾದಲ್ಲಿರುವ ತನ್ನ ನಾಗರಿಕರ ಸುರಕ್ಷತೆಯ ಬಗ್ಗೆ ಭಾರತ ಸರ್ಕಾರ ಅಪಾರವಾದ ಕಾಳಜಿ ಹೊಂದಿದೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಹಿಂದೂ ದೇವಾಲಯ ಮೇಲಿನ ದಾಳಿ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ವಿಪಕ್ಷ ನಾಯಕ ಪಿಯರೆ ಪೊಯ್ಲಿವ್ರೆ ಘಟನೆ ವಿರುದ್ದ ಮಾತನಾಡಿದ್ದಾರೆ. ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರದ ಕೃತ್ಯಗಳು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಾದವರು ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಟ್ರೂಡೊ ತಿಳಿಸಿದ್ದಾರೆ


ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಕೂಡ ದಾಳಿಯನ್ನು ಖಂಡಿಸಿದ್ದು, ಎಲ್ಲಾ ಪೂಜಾ ಸ್ಥಳಗಳ ಸುರಕ್ಷತೆ ಖಾತ್ರಿಗೆ ಕೆನಡಾ ಸರ್ಕಾರವನ್ನು ಒತ್ತಾಯಿಸಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿರಬಹುದು ಎಂದು ಪ್ರಧಾನಿ ಟ್ರುಡೊ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆರೋಪಿಸಿದಾಗಿನಿಂದಲೂ ಭಾರತ ಮತ್ತು ಕೆನಡಾ ನಡುವಿನ ಸಂಬಂಧವು ಗಮನಾರ್ಹವಾಗಿ ಹದಗೆಟ್ಟಿದೆ. ಇದನ್ನು ಭಾರತ ಸಂಪೂರ್ಣವಾಗಿ ನಿರಾಕರಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ...

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...