thekarnatakatoday.com
News

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್

“ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಮತ್ತು ಸುಳ್ಳು ಆರೋಪ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಸಹಾಯಕ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್  ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ  ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಿಎನ್ಎಸ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ. ಅಂತೆಯೇ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ ಎಂದು ತಿಳಿದುಬಂದಿದೆ.

ದೂರಿನಲ್ಲಿರುವಂತೆ ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದು, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.

ಗಣಿ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಸಂಘರ್ಷ ನಡೆಸುತ್ತಿರುವ ಕೇಂದ್ರ ಸಚಿವ ಕುಮಾರಸ್ವಾಮಿ! ಇನ್ನು ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಇದಕ್ಕೆ  ಪ್ರತಿಕ್ರಿಯಿಸಿದ , ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿದ್ದಾರೆ. ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ಕೊಡಿ ಎಂದು ನಿಮ್ಮನ್ನು ಐಪಿಎಸ್ ಆಫೀಸರ್ ಮಾಡಿದ್ದಾರಾ? ನಾನು ಬೇಲ್ ತಗೊಂಡೆ, ತನಿಖೆಗೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂಬರ್ 2. ಹೈಕೋರ್ಟ್ನಲ್ಲಿ ಅಧಿಕಾರಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.

ಈ ಬಳಿಕ ಎಡಿಜಿಪಿ ಚಂದ್ರಶೇಖರ್ ತಮ್ಮ ಸಿಬ್ಬಂದಿಗೆ ಪತ್ರ ಬರೆದು, ಹೆಚ್ ಡಿ ಕುಮಾರಸ್ವಾಮಿ ಅವರು ನನ್ನ ಮೇಲೆ ಸಾಕಷ್ಟು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮತ್ತು ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವರು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ಬ ಆರೋಪಿ. ಇಂತಹ ಆರೋಪ ಮತ್ತು ಬೆದರಿಕೆಗಳಿಗೆ ನಾವು ನಿರಾಶೆಗೊಳ್ಳಬಾರದರು ಎಂದು ಪತ್ರದಲ್ಲಿ ಬರೆದಿದ್ದರು.

ಹಂದಿಗಳ ಜೊತೆ ಜಗಳಕ್ಕೆ ಇಳಿಯಬಾರದು: ಎಚ್ ಡಿ ಕುಮಾರಸ್ವಾಮಿಗೆ  ಎಡಿಜಿಪಿ ಚಂದ್ರಶೇಖರ್ ಟಾಂಗ್ ನೀಡಿ ಅಂತೆಯೇ ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ ಎಂದು ಪತ್ರದಲ್ಲಿ ಜಾರ್ಜ್ ಬರ್ನಾಡ್ ಶಾ ಅವರ ಹೇಳಿಕೆ ಉಲ್ಲೇಖಿಸಿದ್ದರು.

ಈ ಬಳಿಕ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದು ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೆ ಜೆಡಿಎಸ್ ಕಾರ್ಯಕರ್ತರು ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಪ್ರತಿಭಟನೆ ಕೂಡ ನಡೆಸಿದ್ದರು.

ಅಂದಹಾಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ (ಎಸ್‌ಎಸ್‌ವಿಎಂ) ಅಕ್ರಮವಾಗಿ ಗಣಿಗಾರಿಕೆ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿರುವ ಎಡಿಜಿಪಿ ಎಂ.ಚಂದ್ರಶೇಖರ್ ಅವರು ತನಿಖೆ ನಡೆಸುತ್ತಿದ್ದಾರೆ.

ದೂರಿನ ಪ್ರಕಾರ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಖ್ಯೆ 16/2014 ಗೆ ಸಂಬಂಧಿಸಿದ ಹೆಚ್ಚುವರಿ ಸಾಕ್ಷ್ಯಗಳು ಹೊರಬಂದಿವೆ ಎಂದು ಚಂದ್ರಶೇಖರ್ ರಾಜ್ಯಪಾಲರಿಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಮೂವತ್ತು ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸಿದ ಪದ್ಮಶ್ರೀ ಪುರಸ್ಕೃತೆ ಪರಿಸರ ಪ್ರೇಮಿ ತುಳಸಿ ಗೌಡ ನಿಧನ

The Karnataka Today

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ: ಭುಗಿಲೆದ್ದ ಆಕ್ರೋಶ, ದೂರು ದಾಖಲು

The Karnataka Today

ಕಾಂಗ್ರೆಸ್ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಸಂಭ್ರಮ ಬೆಳಗಾವಿಯಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ

The Karnataka Today

Leave a Comment