ಜಮ್ಮುಕಾಶ್ಮೀರ ವಿಧಾನ ಸಭೆಯಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆ370ನೇ ವಿಧಿ ಮರುಸ್ಥಾಪನೆ ನಿರ್ಣಯ ಅಂಗೀಕಾರ

88

“ಪ್ರಮುಖ ಬೆಳವಣಿಗೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ. ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಖಾತರಿಯನ್ನು ಮರುಸ್ಥಾಪಿಸಲು ಮತ್ತು ಈ ನಿಬಂಧನೆಗಳನ್ನು ಮರುಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ತರಲು ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದವನ್ನು ಪ್ರಾರಂಭಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಯಾವುದೇ ಪ್ರಕ್ರಿಯೆಯು ರಾಷ್ಟ್ರೀಯ ಏಕತೆ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ರಕ್ಷಿಸಬೇಕು ಎಂದು ಅದು ಹೇಳಿದೆ.

ಉಪ ಮುಖ್ಯಮಂತ್ರಿ ಅವರು ನಿರ್ಣಯ ಮಂಡಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ತಮ್ಮ ಕುರ್ಚಿಯಿಂದ ಎದ್ದು ನಿಂತು ನಿರ್ಣಯವನ್ನು ಮಂಡಿಸುವುದನ್ನು ವಿರೋಧಿಸಿದರು. ಇದು ಈ ದಿನದ ಕಲಾಪ ಭಾಗವಲ್ಲ ಎಂದು ಅವರು ಹೇಳಿದರು. ಬಿಜೆಪಿ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆ, ಸ್ಪೀಕರ್ ಅಬ್ದುರ್ ರಹೀಮ್ ರಾಥರ್ ಬಿಜೆಪಿ ನಾಯಕರೊಬ್ಬರಿಗೆ ಈ ವಿಷಯದ ಬಗ್ಗೆ ಮಾತನಾಡಲು ಹೇಳಿದರು.

ಆದರೆ, ಬಿಜೆಪಿ ಸದಸ್ಯರು ಧರಣಿ ಹಾಗೂ ಘೋಷಣೆಗಳನ್ನು ಮುಂದುವರಿಸಿದರು. ಪ್ರತಿಭಟನೆಯ ನಡುವೆಯೇ ಸಭಾಧ್ಯಕ್ಷರು, ‘ನೀವು ಮಾತನಾಡಲು ಬಯಸದಿದ್ದರೆ ಮತಕ್ಕೆ ಹಾಕುತ್ತೇನೆ’ ಎಂದರು. ಬಿಜೆಪಿ ಸದಸ್ಯರ ಪ್ರತಿಭಟನೆ ಮುಂದುವರಿದಾಗ ಸ್ಪೀಕರ್ ನಿರ್ಣಯವನ್ನು ಮತಕ್ಕೆ ಹಾಕಿದರು. ಬಿಜೆಪಿಯ ಪ್ರತಿಭಟನೆ ಮತ್ತು ಘೋಷಣೆಗಳ ನಡುವೆಯೇ ಸದನದಲ್ಲಿ ನಿರ್ಣಯ ಅಂಗೀಕರಿಸಲಾಯಿತು. ನಿರ್ಣಯ ಅಂಗೀಕರಿಸಿದ ನಂತರ ಸ್ಪೀಕರ್ ಸದನವನ್ನು 15 ನಿಮಿಷಗಳ ಕಾಲ ಮುಂದೂಡಿದರು.

ಆಗಸ್ಟ್ 15, 2019 ರಂದು ಕೇಂದ್ರ ಸರ್ಕಾರವು ಸಂವಿಧಾನ ವಿಧಿ 370 ಮತ್ತು 35ಎಯನ್ನು ರದ್ದುಗೊಳಿಸಿತು. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

Leave a comment

Leave a Reply

Your email address will not be published. Required fields are marked *

Related Articles

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ...