ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರಕ್ಕಾಗಿ ಅಧಿಕಾರಿಗಳ ಬಲಿ ಪಡೆಯುತ್ತಿದೆ ಆರ್ ಅಶೋಕ್

85

“ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ವ್ಯಂಗ್ಯವಾಡಿದ್ದಾರೆ. 2013-18ರ ಅವಧಿಯಲ್ಲಿ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ, ️ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ️ಕಲ್ಬುರ್ಗಿಯ ದಕ್ಷ ಪೊಲೀಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ, ️ಅನ್ನಭಾಗ್ಯ ಹಗರಣದ ಸಾಕ್ಷ್ಯ ಸಂಗ್ರಹಿಸಿದ್ದ ಐ.ಎ.ಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು.

ಹೂವಿನ ಹಡಗಲಿಯ ಡಿ.ವೈ.ಎಸ್.ಪಿ ಯಾಗಿದ್ದ ಅನುಪಮಾ ಶೆಣೈಗೆ ಕಿರುಕುಳ, ನೌಕರಿಗೆ ರಾಜೀನಾಮೆ, ಮೈಸೂರಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಿಎಂ ಆಪ್ತರಿಂದ ಕಿರುಕುಳ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿಯಾಗಿದ್ದ ರಶ್ಮಿಯವರ ಮೇಲೆ ಹಾಡುಹಗಲೇ ಮಾರಣಾಂತಿಕ ಹಲ್ಲೆ.

2023- ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ, ️ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ, ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು.

ಸಚಿವರ ಆಪ್ತರ ಕಿರುಕುಳದಿಂದ ಬೆಳಗಾವಿಯ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ. ಸಿಎಂ ಸಿದ್ದರಾಮಯ್ಯನವರೇ ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು? ಎಂದು ಪ್ರಶ್ನಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50...

ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಒಬ್ಬ ಉಗ್ರನ ಹತ್ಯೆ

ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ...

ಮಹಿಳಾ ಸಬ್ ಇನ್ಸ್ಪೆಕ್ಟರ್ ಗೆ ಕಪಾಳಮೋಕ್ಷ ಪ್ರಕರಣ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ

ಮಂಡ್ಯ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಸುರೇಶ್...

ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಆರೋಪಿ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ಜನರಿಂದ ಹಣ ವಸೂಲಿ ಮಾಡಿದ್ದ...